ಇತ್ತೀಚಿನ ದಿನಗಳಲ್ಲಿ ತೂಕ ಇಳಿಸುವುದು ದೊಡ್ಡ ಸವಾಲಾಗಿದೆ. ಅನಾರೋಗ್ಯಕರ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದಾಗಿ ಹೆಚ್ಚಿನ ಜನರು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ, ಆಯುರ್ವೇದ ತಜ್ಞರು ತೂಕ ಇಳಿಸಲು ಒಂದು ಸರಳ ವಿಧಾನವನ್ನು ಸೂಚಿಸಿದ್ದಾರೆ.
ಹೊಟ್ಟೆಯ ಸುತ್ತ ಕೊಬ್ಬು ಶೇಖರಣೆಯಾಗಿ, ಅದು ಜೋತು ಬಿದ್ದಂತೆ ಕಾಣುತ್ತದೆ. ಈ ಬೊಜ್ಜು ಕರಗಿಸಲು, ಆಯುರ್ವೇದ ತಜ್ಞರು ಅಶ್ವಗಂಧ ಪುಡಿಯನ್ನು ಬಳಸಲು ಸಲಹೆ ನೀಡುತ್ತಾರೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ನೀರಿಗೆ ಈ ಪುಡಿ ಬೆರೆಸಿ ಕುಡಿದರೆ ಬೇಗ ತೂಕ ಇಳಿಯುತ್ತದೆ.
23
ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು
ಅಶ್ವಗಂಧ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಒತ್ತಡ ಕಡಿಮೆ ಮಾಡಿ, ನಿದ್ದೆ ಚೆನ್ನಾಗಿ ಬರುವಂತೆ ಮಾಡುತ್ತದೆ. ನಾವು ಒತ್ತಡಕ್ಕೆ ಒಳಗಾದಾಗ ಕಾರ್ಟಿಸೋಲ್ ಹಾರ್ಮೋನ್ ಉತ್ಪತ್ತಿ ಹೆಚ್ಚುತ್ತದೆ, ಇದರಿಂದ ದೇಹದಲ್ಲಿ ಕೊಬ್ಬು ಬೆಳೆಯುತ್ತದೆ. ಅಶ್ವಗಂಧ ಪುಡಿ ಸೇವನೆಯಿಂದ ಕಾರ್ಟಿಸೋಲ್ ನಿಯಂತ್ರಣಕ್ಕೆ ಬರುತ್ತದೆ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ದೇಹದ ವಿಷಕಾರಿ ಅಂಶಗಳನ್ನು ಹೊರಹಾಕುತ್ತವೆ.
33
ಎಲ್ಲಿ ಸಿಗುತ್ತೇ?
ಅಶ್ವಗಂಧ ಪುಡಿ ಎಲ್ಲಾ ಆಯುರ್ವೇದ ಅಂಗಡಿಗಳಲ್ಲಿ ಸಿಗುತ್ತದೆ. ಪ್ರತಿದಿನ ಬೆಳಿಗ್ಗೆ ಒಂದು ಲೋಟ ಬಿಸಿ ನೀರಿಗೆ ಅರ್ಧ ಟೀ ಚಮಚ ಪುಡಿ ಹಾಕಿ. ರುಚಿಗಾಗಿ ಸ್ವಲ್ಪ ಜೇನುತುಪ್ಪ ಬೆರೆಸಬಹುದು. ಪುಡಿ ಇಷ್ಟವಿಲ್ಲದಿದ್ದರೆ, ಒಣಗಿದ ಅಶ್ವಗಂಧ ಬೇರುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿ, ಬೆಳಿಗ್ಗೆ ಆ ನೀರನ್ನು ಕುದಿಸಿ, ಫಿಲ್ಟರ್ ಮಾಡಿ ಕುಡಿಯಿರಿ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.