ಗುಲಾಬಿ ಬಣ್ಣದ ಸೀರೆಯುಟ್ಟು ನಾಚಿ ನಿಂತ ನಮ್ರತಾ, ಕಾರ್ತಿಕ್ ಹೆಸರೇಳಿ ರೇಗಿಸಿದ ನೆಟ್ಟಿಗರು!

First Published Apr 4, 2024, 11:14 AM IST

ಕಿರುತೆರೆ ನಟಿ ನಮ್ರತಾ ಗೌಡ, ಬಿಗ್‌ಬಾಸ್ ಮನೆಯಿಂದ ಹೊರಬರುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಇತ್ತೀಚಿಗೆ ಪಿಂಕ್‌ ಸೀರೆಯುಟ್ಟು ಮುದ್ದಾಗಿ ನಗೆ ಬೀರಿ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

ಕಿರುತೆರೆ ನಟಿ ನಮ್ರತಾ ಗೌಡ, ಬಿಗ್‌ಬಾಸ್ ಮನೆಯಿಂದ ಹೊರಬರುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ಇತ್ತೀಚಿಗೆ ಪಿಂಕ್‌ ಸೀರೆಯುಟ್ಟು ಮುದ್ದಾಗಿ ನಗೆ ಬೀರಿ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

ಪಿಂಕ್ ಸೀರೆಯಲ್ಲಿ ಸೈಡ್ ಡಿಸೈನ್ ಇರೋ ಸಿಂಪಲ್‌ ಸೀರೆಯನ್ನು ನಮ್ರತಾ ಉಟ್ಟಿದ್ದಾರೆ. ಇದಕ್ಕೆ 'ಶಿ ವೋರ್ ಎ ಸ್ಮೈಲ್‌ ಲೈಕ್ ಲೋಡೆಡ್‌ ಗೌನ್' ಎಂದು ಶೀರ್ಷಿಕೆ ನೀಡಿದ್ದಾರೆ.

ನಮ್ರತಾ ಗೌಡ ಸ್ಯಾರಿ ಲುಕ್‌ಗೆ ನೆಟ್ಟಿಗರು ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ. ಲೈಕ್ಸ್, ಹಾರ್ಟ್‌ ಎಮೋಜಿ ಸೆಂಡ್ ಮಾಡಿದ್ದಾರೆ. ಬ್ಯೂಟಿಫುಲ್‌, ಕ್ಯೂಟ್ ಎಂದೆಲ್ಲಾ ಹೊಗಳಿದ್ದಾರೆ. 

ಹಲವು ಅಭಿಮಾನಿಗಳು ಕಾರ್ತಿಕ್ ಎಂದು ಕಾಮೆಂಟ್ ಮಾಡಿ ಕಾಲೆಳೆದಿದ್ದಾರೆ. ಒಬ್ಬ ಅಭಿಮಾನಿ, 'ಸೀರೆಯಲ್ಲಿ ಗೊಂಬೆಯಂತೆ ಕಾಣುತ್ತಿದ್ದೀರಿ' ಎಂದು ಕಾಮೆಂಟ್ ಮಾಡಿದ್ದಾರೆ. 

ಇನ್ನೊಬ್ಬರು, 'ಮೂಗುತಿ ಸುಂದರಿ' ಎಂದು ಬಣ್ಣಿಸಿದ್ದಾರೆ. 'ಹೀಗೆ ತಾನೇ ಪ್ರೇಮ ಸೆಳೆಯುವ ಘಳಿಗೆ' ಎಂದು ಇನ್ನೊಬ್ಬರು ಹಾಡನ್ನೇ ಕಾಮೆಂಟ್ ಮಾಡಿದ್ದಾರೆ. ಒಟ್ನಲ್ಲಿ ನಮ್ರತಾ ಬ್ಯೂಟಿಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ನಮ್ರತಾ ಗೌಡ 'ಕೃಷ್ಣ ರುಕ್ಮಿಣಿ' ಧಾರಾವಾಹಿಯಲ್ಲಿ ನಟಿಸಿ ಎಲ್ಲರ ಮೆಚ್ಚುಗೆಗೆ ಗಿಟ್ಟಿಸಿಕೊಂಡಿದ್ದರು. ಈ ಮೂಲಕ ನಮ್ರತಾ ಗೌಡ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ 'ಪುಟ್ಟ ಗೌರಿ' ಮದುವೆ ಧಾರಾವಾಹಿಯಲ್ಲಿ ಹಿಮ ಪಾತ್ರದಲ್ಲಿ ಮಿಂಚಿದ್ದರು. 

ಕನ್ನಡ ಕಿರುತೆರೆಯಲ್ಲಿ ಕೆಲ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿರುವ ನಮ್ರತಾ ಗೌಡ, ಜೀ ಕನ್ನಡದಲ್ಲಿ ಪ್ರಸಾರವಾಗುವ ನಾಗಿಣಿ 2 ಸೀರಿಯಲ್ ಮೂಲಕ ಹೆಚ್ಚು ಜನಪ್ರಿಯತೆಯನ್ನು ಪಡೆದಿದ್ದಾರೆ. ತಮ್ಮ ಉತ್ತಮ ನಟನೆಯಿಂದ ಮನೆ ಮಾತಾಗಿದ್ದರು. 

ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಕಿರುತೆರೆ, ಯೂಟ್ಯೂಬ್​ ಚಾನೆಲ್​ನಲ್ಲಿ ಸದ್ದು ಮಾಡ್ತಿದ್ದ ನಮ್ರತಾ ಗೌಡ, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ.

click me!