ಅಲೋವೆರಾ (Aloevera) ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು, ಮತ್ತು ಇದು ಚರ್ಮ ಮತ್ತು ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಣೆ ಮಾಡುತ್ತೆ. ಅಲೋವೆರಾ ಜೆಲ್ ನಲ್ಲಿ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ 12, ಕೊಬ್ಬಿನಾಮ್ಲಗಳು ಮತ್ತು ಅಮೈನೋ ಆಮ್ಲಗಳಿವೆ. ಅಲೋವೆರಾ ಜೆಲ್ ಅನ್ನು ನೆತ್ತಿಗೆ ಹಚ್ಚುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆ. ಇದು ತುರಿಕೆ, ಸೋಂಕು ಮತ್ತು ಕೂದಲಿನ ಶುಷ್ಕತೆಯಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಅಲೋವೆರಾದಲ್ಲಿ ಅಲೋಯಿನ್ ಎಂಬ ರಾಸಾಯನಿಕ ಸಂಯುಕ್ತವಿದೆ, ಇದು ಕೂದಲಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಇದು ಕೂದಲಿನ ಬೆಳವಣಿಗೆಯನ್ನು ವೇಗಗೊಳಿಸುತ್ತದೆ.