ರೇಷ್ಮೆ ಸೀರೆಯುಟ್ಟು ಯುಗಾದಿ ಹಬ್ಬಕ್ಕೆ ಶುಭಾಶಯ ಕೋರಿದ ನಮ್ರತಾ ಗೌಡ

First Published | Apr 9, 2024, 11:08 AM IST

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆ ಮಂದಿ ತಳಿರು ತೋರಣವನ್ನು ಕಟ್ಟಿ ಹಬ್ಬದಡುಗೆಯನ್ನು ಮಾಡಿ ಸಂಭ್ರಮಿಸುತ್ತಿದ್ದಾರೆ. ಸೀರಿಯಲ್ ನಟಿ, ಬಿಗ್‌ಬಾಸ್ ಖ್ಯಾತಿಯ ನಮ್ರತಾ ಗೌಡ ಸಹ ಯುಗಾದಿ ಹಬ್ಬಕ್ಕೆ ನಾಡಿನ ಜನತೆಗೆ ಶುಭ ಹಾರೈಸಿದ್ದಾರೆ.

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮನೆ ಮಂದಿ ತಳಿರು ತೋರಣವನ್ನು ಕಟ್ಟಿ ಹಬ್ಬದಡುಗೆಯನ್ನು ಮಾಡಿ ಸಂಭ್ರಮಿಸುತ್ತಿದ್ದಾರೆ. ಸ್ಯಾಂಡಲ್‌ವುಡ್‌ನ ನಟ-ನಟಿಯರು ಸಹ ಯುಗಾದಿ ಹಬ್ಬಕ್ಕೆ ಶುಭ ಹಾರೈಸುತ್ತಿದ್ದಾರೆ.

ಸೀರಿಯಲ್ ನಟಿ, ಬಿಗ್‌ಬಾಸ್ ಖ್ಯಾತಿಯ ನಮ್ರತಾ ಗೌಡ ಸಹ ಯುಗಾದಿ ಹಬ್ಬಕ್ಕೆ ನಾಡಿನ ಜನತೆಗೆ ಶುಭ ಹಾರೈಸಿದ್ದಾರೆ. ಬ್ಲೂ ಹಾಗೂ ಆರೆಂಜ್‌ ಕಾಂಬಿನೇಷನ್‌ನ ರೇಷ್ಮೆ ಸೀರೆಯುಟ್ಟು ಹಬ್ಬದ ಶುಭಾಶಯ ತಿಳಿಸಿದ್ದಾರೆ.

Tap to resize

ಆರೆಂಜ್ ಕಲರ್ ಬ್ಲೌಸ್‌ಗೆ ಬ್ಲೂ ಕಲರ್‌ ಸೀರೆಯನ್ನು ಪೇರ್ ಮಾಡಿದ್ದಾರೆ. ಇದಕ್ಕೆ ತಕ್ಕುದಾದ ಕಿವಿಯೋಲೆ, ನೆಕ್ಲೇಸ್, ನೆತ್ತಿ ಬೈತಲೆ ಸಹ ಧರಿಸಿ ತುಂಬಾ ಸುಂದರವಾಗಿ ಕಾಣಿಸುತ್ತಿದ್ದಾರೆ.

'ಯುಗಾದಿಯ ಶುಭ ಸಂದರ್ಭದಲ್ಲಿ ನಿಮ್ಮ ಜೀವನವು ಸುಖ ಸಂತೋಷ ಸಮೃದ್ಧಿ ಹಾಗೂ ಯಶಸ್ಸಿನಿಂದ ತುಂಬಲಿ ಎಂದು ಹಾರೈಸುತ್ತೇನೆ. ಯುಗಾದಿ ಹಬ್ಬದ ಶುಭಾಶಯಗಳು' ಎಂದು ನಮ್ರತಾ ಶುಭ ಕೋರಿದ್ದಾರೆ.

ಇದಕ್ಕೆ ನೆಟ್ಟಿಗರು ಸಹ ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ. ಕಾರ್ತಿಕ್ ಫ್ಯಾನ್ಸ್ ಕಡೆಯಿಂದಾಗನೂ ಹಬ್ಬದ ಶುಭಾಶಯ ಎಂದಿದ್ದಾರೆ. ಮತ್ತೆ ಕೆಲವರು ಸ್ನೇಹಿತ್ ಫ್ಯಾನ್ಸ್ ಬಳಗದಿಂದಾನೂ ಯುಗಾದಿ ವಿಶಸ್ ಎಂದು ಕಾಮೆಂಟ್ ಮಾಡಿದ್ದಾರೆ.

ನಮ್ರತಾ ಗೌಡ 'ಕೃಷ್ಣ ರುಕ್ಮಿಣಿ' ಧಾರಾವಾಹಿಯಲ್ಲಿ ನಟಿಸಿ ಎಲ್ಲರ ಮೆಚ್ಚುಗೆಗೆ ಗಿಟ್ಟಿಸಿಕೊಂಡಿದ್ದರು. ಈ ಮೂಲಕ ನಮ್ರತಾ ಗೌಡ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ 'ಪುಟ್ಟ ಗೌರಿ' ಮದುವೆ ಧಾರಾವಾಹಿಯಲ್ಲಿ ಹಿಮ ಪಾತ್ರದಲ್ಲಿ ಮಿಂಚಿದ್ದರು. 

ಕನ್ನಡ ಕಿರುತೆರೆಯಲ್ಲಿ ಕೆಲ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿರುವ ನಮ್ರತಾ ಗೌಡ, ಜೀ ಕನ್ನಡದಲ್ಲಿ ಪ್ರಸಾರವಾಗುವ ನಾಗಿಣಿ 2 ಸೀರಿಯಲ್ ಮೂಲಕ ಹೆಚ್ಚು ಜನಪ್ರಿಯತೆಯನ್ನು ಪಡೆದಿದ್ದಾರೆ. ತಮ್ಮ ಉತ್ತಮ ನಟನೆಯಿಂದ ಮನೆ ಮಾತಾಗಿದ್ದರು. 

ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಕಿರುತೆರೆ, ಯೂಟ್ಯೂಬ್​ ಚಾನೆಲ್​ನಲ್ಲಿ ಸದ್ದು ಮಾಡ್ತಿದ್ದ ನಮ್ರತಾ ಗೌಡ, ಇದೀಗ ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿದ್ದಾರೆ. ಆಗಾಗ ಮಾಡರ್ನ್ ಹಾಗೂ ಟ್ರೆಡಿಶನಲ್ ಲುಕ್‌ನಲ್ಲಿ ಫೋಟೋಸ್ ಶೇರ್ ಮಾಡುತ್ತಾರೆ.

Latest Videos

click me!