ಕನ್ನಡತಿ ಶೋಭಾ ಶೆಟ್ಟಿ, ತೆಲುಗು ಬಿಗ್‌ಬಾಸ್ 7ರಲ್ಲಿ ಭಾಗವಹಿಸಿದ ನಂತರ ಹೆಚ್ಚು ಫೇಮಸ್ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಹೆಚ್ಚು ಆಕ್ಟಿವ್ ಆಗಿದ್ದಾರೆ. ಆಗಾಗ ಇನ್‌ಸ್ಟಾಗ್ರಾಂನಲ್ಲಿ ಮಾಡರ್ನ್ ಹಾಗೂ ಟ್ರೆಡಿಶನಲ್ ಲುಕ್‌ನಲ್ಲಿ ಫೋಟೋಸ್ ಶೇರ್ ಮಾಡುತ್ತಿರುತ್ತಾರೆ.
ಇತ್ತೀಚಿಗೆ ಲ್ಯಾವೆಂಡರ್ ಕಲರ್ ಸೀರೆಯುಟ್ಟ ಫೋಟೋಸ್ ಪೋಸ್ಟ್ ಮಾಡಿದ್ದಾರೆ. ದೊಡ್ಡದಾದ ಇಯರಿಂಗ್ ಸಹ ಹಾಕಿಕೊಂಡು ಎಲ್ಲರ ಗಮನ ಸೆಳೆದಿದ್ದಾರೆ.
ಶೋಭಾ ಶೆಟ್ಟಿಯ ಈ ಗ್ರ್ಯಾಂಡ್ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಲೈಕ್ಸ್, ಹಾರ್ಟ್ ಎಮೋಜಿ ಸೆಂಡ್ ಮಾಡಿದ್ದಾರೆ. ಬ್ಯೂಟಿಫುಲ್, ಕ್ಯೂಟ್, ಏಂಜೆಲ್, ನೈಸ್ ಲುಕ್ಕಿಂಗ್, ಗಾರ್ಜಿಯಸ್, ಸೂಪರ್ ಎಂದೆಲ್ಲಾ ಕಾಮೆಂಟ್ ಮಾಡಿದ್ದಾರೆ.
ಮತ್ತೆ ಕೆಲವರು ಶೇಪ್ ನೋಡಿ ಫ್ಲಾಟ್ ಆದ್ವಿ, ಹಾಟ್ ಬ್ಯೂಟಿ ಎಂದೆಲ್ಲಾ ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು ಸ್ಯಾರಿ ಮತ್ತು ಹಾಫ್ ಸ್ಯಾರಿಯಲ್ಲಿ ನೀವು ತುಂಬಾ ಚೆನ್ನಾಗಿ ಕಾಣ್ತೀರಿ ಎಂದು ಹೊಗಳಿದ್ದಾರೆ.
ತೆಲುಗು ಧಾರಾವಾಹಿಗಳಲ್ಲಿ ಸಕ್ರಿಯವಾಗಿರುವ ನಟಿ ಶೋಭಾ ಶೆಟ್ಟಿ ಇತ್ತೀಚಿಗಷ್ಟೇ ತಮ್ಮ ಸಹನಟ ಯಶವಂತ್ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಶೋಭಾ ಶೆಟ್ಟಿ-ಯಶವಂತ್ ನಿಶ್ಚಿತಾರ್ಥದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು
ಕನ್ನಡದಲ್ಲಿ ನಟಿ ಮೊದಲು 'ಅಗ್ನಿಸಾಕ್ಷಿ' ಧಾರಾವಾಹಿಯಲ್ಲಿ ನಟಿಸಿದ್ದರು. ಇದರಲ್ಲಿ ಶೋಭಾ ಶೆಟ್ಟಿ ಮಾತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. 6 ವರ್ಷಗಳಿಗೂ ಅಧಿಕ ಕಾಲ ಕಲರ್ಸ್ ಕನ್ನಡದಲ್ಲಿ 'ಅಗ್ನಿಸಾಕ್ಷಿ' ಪ್ರಸಾರವಾಗಿತ್ತು. ಇದರಲ್ಲಿ ಶೋಭಾ ಶೆಟ್ಟಿ ತನು ಪಾತ್ರದಲ್ಲಿ ನಟಿಸಿದ್ದರು.
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರಾವಗುತ್ತಿದ್ದ ರುಕ್ಕು ಧಾರಾವಾಹಿಯಲ್ಲೂ ಶೋಭಾ ಶೆಟ್ಟಿ ಕೆಲ ತಿಂಗಳ ಕಾಲ ನಟಿಸಿದರು. ಈ ಸೀರಿಯಲ್‌ನ ಟಿಆರ್‌ಪಿ ಚೆನ್ನಾಗಿಲ್ಲವಾದ ಕಾರಣ ಧಾರಾವಾಹಿಯಿಂದ ಹೊರ ನಡೆದರು.
ಆ ನಂತರ ನಟಿ ತೆಲುಗು ಧಾರಾವಾಹಿಗಳಲ್ಲಿ ಅಭಿನಯಿಸಲು ಆರಂಭಿಸಿದರು. ಇವರು ಅಭಿನಯಿಸಿದ 'ಕಾರ್ತಿಕ ದೀಪಂ' ಸೀರಿಯಲ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು. ತೆಲುಗು ಕಿರುತೆರೆಯಲ್ಲಿ ಸಕ್ರಿಯವಾಗಿರುವ ಕಾರಣ ಶೋಭಾ ಶೆಟ್ಟಿ ಅವರನ್ನು ಬಿಗ್‌ಬಾಸ್‌ಗೆ ಆಯ್ಕೆ ಮಾಡಲಾಗಿತ್ತು.