ಕರ್ನಾಟಕ ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಸಖತ್ ಆಕ್ಟಿವ್. ಇತ್ತೀಚೆಗೆ ಅವರು ರೆಡ್ ಕಲರ್ ಲೆಹಂಗಾದಲ್ಲಿ ಸಖತ್ ಹಾಟ್ ಆಗಿ ಮಿಂಚಿದ್ದಾರೆ.
ಡಾರ್ಕ್ ರೆಡ್ ಶೈನಿಂಗ್ ಲೆಹಂಗಾಕ್ಕೆ ದೊಡ್ಡ ಗ್ರೀನ್ ಸ್ಟೋನ್‌ನ ನೆಕ್ಲೇಸ್ ಧರಿಸಿ ಓಪನ್ ಹೇರ್‌ನಲ್ಲಿ ಮುಂದ್ದಾಗಿ ಫೋಸ್ ಕೊಟ್ಟಿದ್ದಾರೆ. ನೆಟ್ಟಿಗರು ಕರಾವಳಿ ಬೆಡಗಿಯ ಹಾಟ್ ಲುಕ್ ಫಿದಾ ಆಗಿದ್ದಾರೆ.
ಟಾಲಿವುಡ್ ಇಂಡಸ್ಟ್ರಿಯಲ್ಲಿ ಮೋಸ್ಟ್ ವಾಂಟೆಡ್ ಹೀರೋಯಿನ್‌ಗಳಲ್ಲಿ ಕೃತಿ ಶೆಟ್ಟಿ ಒಬ್ಬರು. ಮಂಗಳೂರಿನ ಬೆಡಗಿ ಈಕೆ. ಹಲವು ಖ್ಯಾತ ನಟರ ಜೊತೆ ತೆರೆ ಹಂಚಿಕೊಂಡು ಮಿಂಚುತ್ತಿದ್ದಾರೆ. ಆದ್ರೆ ಇತ್ತೀಚಿಗೆ ನಟಿಸಿದ ಹಲವು ಸಿನಿಮಾಗಳು ಫ್ಲಾಪ್ ಆಗುತ್ತಿವೆ. ಆದರೂ ನಟಿ ಸೋಷಿಯಲ್ ಮೀಡಿಯಾದಲ್ಲಿ ಸ್ಟೈಲಿಶ್ ಫೋಟೋಗಳನ್ನು ಪೋಸ್ಟ್ ಮಾಡುತ್ತಲೇ ಇರ್ತಾರೆ.
ರೆಡ್ ಲೆಹಂಗಾದ ಈ ಫೋಟೋಗೆ ನೆಟ್ಟಿಗರು ಲೈಕ್ಸ್, ಹಾರ್ಟ್ ಎಮೋಜಿ ಸೆಂಡ್ ಮಾಡಿದ್ದಾರೆ. ಬ್ಲೂ ಕ್ವೀನ್, ಗಾರ್ಜಿಯಸ್, ಬ್ಯೂಟಿಫುಲ್ ಎಂದೆಲ್ಲಾ ಕಾಮೆಂಟ್ ಮಾಡಿದ್ದಾರೆ.
ಕೃತಿ ಶೆಟ್ಟಿ ನಟನೆ ಆರಂಭಿಸಿದ್ದು ಹಿಂದಿ ಸಿನಿಮಾ ಮೂಲಕ. ಹೃತಿಕ್ ರೋಷನ್ ನಟನೆಯ 'ಸೂಪರ್ 30' ಸಿನಿಮಾದಲ್ಲಿ ಬಾಲನಟಿಯಾಗಿ ಕೃತಿ ನಟಿಸಿದ್ದರು. ಕೃತಿ ಶೆಟ್ಟಿ 'ಉಪ್ಪೇನ' ಚಿತ್ರದ ಮೂಲಕ ತೆಲುಗು ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದರು.
ಈ ಸಿನಿಮಾ ಸಖತ್ ಹಿಟ್ ಆಗಿತ್ತು. ನಾಯಕಿಯಾಗಿ ಎಂಟ್ರಿ ಕೊಟ್ಟ ಮೊದಲ ಸಿನಿಮಾದಲ್ಲೇ ತನ್ನ ಅಭಿನಯ ಮತ್ತು ಸೌಂದರ್ಯದ ಕೃತಿ ಸಿನಿ ಪ್ರೇಕ್ಷಕರ ಮನಗೆದ್ದರು.
ಉಪ್ಪೇನಾ ನಂತರ ನಾನಿ ಜತೆ 'ಶ್ಯಾಮ್ ಸಿಂಗ ರಾಯ್' ಹಾಗೂ ನಾಗ ಚೈತನ್ಯ ಜೊತೆ 'ಬಂಗಾರರಾಜು' ಸಿನಿಮಾಗಳಲ್ಲಿ ನಟಿಸಿ ತೆಲುಗು ಪ್ರೇಕ್ಷಕರಿಗೆ ಹತ್ತಿರವಾದರು.
ಇತ್ತೀಚಿಗೆ ಕೃತಿ ನಟಿಸಿದ ಸಾಲು ಸಾಲು ಚಿತ್ರಗಳ ಫ್ಲಾಪ್ ಆಗಿದ್ದಲ್ಲದೇ ಅವರಿಗೆ ಬರುತ್ತಿದ್ದ ಆಫರ್‌ಗಳು ದಿಢೀರ್ ಕಡಿಮೆಯಾಗಿದೆ. ಇತ್ತೀಚೆಗಷ್ಟೇ ಕೃತಿ ‘ಕಸ್ಟಡಿ’ ಸಿನಿಮಾ ಮೂಲಕ ಕಮ್‌ಬ್ಯಾಕ್ ಮಾಡಿದ್ದರು.