ದೇಶದ ಖ್ಯಾತ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ, ಅಂಬಾನಿ ಕುಟುಂಬದ ಕಿರಿಯ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಅವರ ವಿವಾಹಪೂರ್ವ ಕಾರ್ಯಕ್ರಮವು ಜಾಮ್‌ನಗರದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಅಂಬಾನಿ ಕುಟುಂಬದ ಮಹಿಳೆಯರು ಕೋಟ್ಯಂತರ ರೂಪಾಯಿ ಬೆಲೆಬಾಳುವ ಬಟ್ಟೆ ಮತ್ತು ಆಭರಣಗಳನ್ನು ಧರಿಸಿದ್ದರು. ಅಂಬಾನಿ ಕುಟುಂಬದ ಮಹಿಳೆಯರು ತೊಡುತ್ತಿದ್ದ ಆಭರಣಗಳತ್ತ ಎಲ್ಲರ ಕಣ್ಣು ನೆಟ್ಟಿತ್ತು. ಆದರೆ ಕೈಗೆ ಕಟ್ಟಿದ್ದ ಕಪ್ಪು ದಾರದ ಕಡೆ ಗಮನ ಹರಿಸಿದವರು ಬಹಳ ಕಡಿಮೆ.