ಹಬ್ಬದಂಗವಾಗಿ ಚರ್ಚುಗಳಲ್ಲಿ ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದರು. ಧರ್ಮಗುರುಗಳು ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಗಳನ್ನು ಭಕ್ತರಿಗೆ ವಿತರಿಸಿ ಆಶೀರ್ವದಿಸಿದರು.
ನಂತರ ಪವಿತ್ರ ಬಲಿಪೂಜೆಯನ್ನು ನಡೆಸಿ, ಕುಟುಂಬ ಜೀವನ ಹಾಗೂ ಸಮಾಜದಲ್ಲಿ ಮಹಿಳೆಯ ಸ್ಥಾನಮಾನದ ಕುರಿತು ಪ್ರವಚನ ನೀಡಿದ ಉಡುಪಿ ಕ್ರೆಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಜೆರಾಲ್ಡ್ ಐಸಾಕ್ ಲೋಬೊ
ಉಡುಪಿ ಕ್ರೆಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಜೆರಾಲ್ಡ್ ಐಸಾಕ್ ಲೋಬೊ ಅವರು ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನಲ್ಲಿ ಹಬ್ಬದ ಬಲಿಪೂಜೆ ಅರ್ಪಿಸಿ ಹೊಸ ತೆನೆಗಳನ್ನು ಆಶೀರ್ವದಿಸಿ ಹಬ್ಬದ ಸಂದೇಶ ನೀಡಿದರು.
ಇದೇ ವೇಳೆ ಚಿಕ್ಕ ಮಕ್ಕಳಿಗೆ ಸಿಹಿ ತಿಂಡಿ, ಕಬ್ಬು ಸಹ ವಿತರಿಸಲಾಯಿತು. ಇಗರ್ಜಿಯಿಂದ ತಂದದ ಭತ್ತದ ತೆನೆಯನ್ನು ಕುಟುಂಬದ ಹಿರಿಯರು ಮನೆಗೆ ತಂದು ದೇವರ ಪೀಠದ ಮೇಲಿಟ್ಟು ಪ್ರಾರ್ಥನೆ ಸಲ್ಲಿಸಿ, ನವೆಂ ಜೆವಾಣ್ ಅಂದರೇ ಹೊಸ ಭತ್ತದ ತೆನೆಗಳನ್ನು ಸುಲಿದು ಕುಟುಂಬದ ಸದಸ್ಯರೊಂದಿಗೆ ಪಾಯಸ ಅಥವಾ ಹಾಲಿನೊಂದಿಗೆ ಸಂಪೂರ್ಣ ಸಸ್ಯಾಹಾರವನ್ನು ಸೇವಿಸಿದರು.