ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದ ಕೆ ಕೆ ಬಾಲಕೃಷ್ಣರವರು ನವರಾತ್ರಿ ಪ್ರಯುಕ್ತ ಗೊಂಬೆಗಳನ್ನು ಕೂರಿಸಿದ್ದು ಕಳಸ ಪಟ್ಟಣದ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಮನೆಯಲ್ಲಿ ಪ್ರತಿಷ್ಠಾಪಿಸಿರುವ ಸಾಂಪ್ರದಾಯಿಕ ಪಟ್ಟದ ಗೊಂಬೆಗಳು ಮೈಸೂರು ರಾಜ ಪರಂಪರೆಯ ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ವೈಭವವನ್ನು ಅನಾವರಣಗೊಳಿಸಿವೆ. ಯಧುವಂಶಸ್ಥರ ಪರಂಪರೆಯ ಕೆಂಪು ಚಂದನದ ಮರದಲ್ಲಿ ಕೆತ್ತಲಾದ ಪಟ್ಟದ ಗೊಂಬೆಗಳು, ಮೈಸೂರು ಮಹಾರಾಜರ ದಸರಾ ದರ್ಬಾರ್, ಜಂಬೂಸವಾರಿ, ಅರಮನೆ, ಅರಸರ ಸಾಂಪ್ರದಾಯಿಕ ಆಚರಣೆಗಳ ವೈಭವವನ್ನು ಸಾರುತ್ತಿದ್ದರೆ, ಇನ್ನೂ ಕೆಲವು ಗೊಂಬೆಗಳು ವಿವಿಧ ದೇವತೆಗಳ ವಿವಿಧ ಭಂಗಿಗಳನ್ನು ಪ್ರದರ್ಶಿಸುತ್ತಿವೆ.