ಆಗಿ ಹುಣ್ಣಿಮೆ ಹಿನ್ನಲೆ: ಚುನಾವಣೆ ಮಧ್ಯೆಯೂ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದ ಭಕ್ತ ಸಾಗರ

First Published May 5, 2023, 10:45 AM IST

ಮೇ 13ರಂದು ಶ್ರೀಹುಲಿಗೆಮ್ಮ ದೇವಿಯ ರಥೋತ್ಸವದ ಮುನ್ನ ಹುಣ್ಣಿಮೆ ದಿನ ಹುಲಿಗಿಗೆ ಭಕ್ತಸಾಗರ ಹರಿದು ಬಂದಿದೆ. ಮುಂಜಾನೆಯಿಂದಲೇ ಸಾಲುಗಟ್ಟಿ ನಿಂತು ದೇವಿ ದರ್ಶನವನ್ನು ಭಕ್ತರು ಪಡೆಯುತ್ತಿದ್ದಾರೆ. 

ಕೊಪ್ಪಳ (ಮೇ.05): ಕರ್ನಾಟಕ ವಿಧಾನಸಭೆ ಚುನಾವಣೆ ಮಧ್ಯೆಯೂ ಇಂದು ಆಗಿ ಹುಣ್ಣಿಮೆ ಹಿನ್ನಲೆ ಇಲ್ಲಿನ ಪ್ರಸಿದ್ಧ ಪುಣ್ಯಕ್ಷೇತ್ರ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತ ಸಾಗರವೇ ಆಗಮಿಸಿದೆ. ಮೇ 13ರಂದು ಶ್ರೀಹುಲಿಗೆಮ್ಮ ದೇವಿಯ ರಥೋತ್ಸವದ ಮುನ್ನ ಹುಣ್ಣಿಮೆ ದಿನ ಹುಲಿಗಿಗೆ ಭಕ್ತಸಾಗರ ಹರಿದು ಬಂದಿದೆ. 

ಮುಂಜಾನೆಯಿಂದಲೇ ಸಾಲುಗಟ್ಟಿ ನಿಂತು ದೇವಿ ದರ್ಶನವನ್ನು ಭಕ್ತರು ಪಡೆಯುತ್ತಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದಿಂದ  ಭಕ್ತಸಾಗರ ಬಂದಿದೆ.

ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಹುಲಿಗೆಮ್ಮ ದೇವಿ ಜಾತ್ರೆ ಆಚರಿಸಿ: ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಶ್ರೀಹುಲಿಗೆಮ್ಮ ದೇವಿ ಜಾತ್ರೋತ್ಸವ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಸೂಚಿಸಿದರು.

ತಾಲೂಕಿನ ಹುಲಗಿಯ ಶ್ರೀಹುಲಿಗೆಮ್ಮ ದೇವಿ ದೇವಸ್ಥಾನದ 2023ರ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ದೇವಸ್ಥಾನದ ಆಡಳಿತಾಧಿಕಾರಿಗಳು ಆಗಿರುವ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಕೆಸ್ವಾನ್‌ ಸಭಾಂಗಣ-2ರಲ್ಲಿ ಪೂರ್ವಭಾವಿ ಸಭೆ ಜರುಗಿತು. ಈ ವೇಳೆ ಮಾತನಾಡಿದ ಅವರು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದ ಹಾಗೇ ಜಾತ್ರೋತ್ಸವ ಏರ್ಪಾಡು ಮಾಡಬೇಕು.ಹುಲಿಗಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಕುಡಿವ ನೀರಿನ ವ್ಯವಸ್ಥೆ, ನೆರಳಿನ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಬೇಕು. 

ಸಂಪರ್ಕ ರಸ್ತೆ ಹಾಗೂ ಬೈಪಾಸ್‌ ರಸ್ತೆ ಸರಿಪಡಿಸಬೇಕು. ತಾತ್ಕಾಲಿಕವಾಗಿ ಸಾಮೂಹಿಕ ಸ್ನಾನದ ಗೃಹಗಳ ಮತ್ತು ಶೌಚಾಲಯಗಳ ವ್ಯವಸ್ಥೆ ಕಲ್ಪಿಸಿಕೊಡಬೇಕು. ಜಾತ್ರಾ ಅವಧಿಯಲ್ಲಿ ನಿರಂತರ ವಿದ್ಯುತ್‌ ಸರಬರಾಜು,ದೇವಸ್ಥಾನದ ಗುಡಿ-ಗೋಪುರಗಳಿಗೆ ವಿದ್ಯುತ್‌ ಅಲಂಕಾರ ಮತ್ತು ಬೆಳಕಿನ ವ್ಯವಸ್ಥೆ ಮಾಡಬೇಕು. ಸಿಸಿ ಕ್ಯಾಮೇರಾ ವ್ಯವಸ್ಥೆ ಸೇರಿದಂತೆ ಅಗತ್ಯ ಪೊಲೀಸ್‌ ಬಂದೋಬಸ್‌್ತ,ತುಂಗಭದ್ರ ಆಣೆಕಟ್ಟೆಯಿಂದ ನದಿಗೆ ನೀರು ಬಿಡುವ ಕುರಿತು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

click me!