ಗಂಗಾವತಿ(ಜೂ.29): ಜಗತ್ತಿನಾದ್ಯಂತ ಇಂದು(ಗುರುವಾರ) ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನ ಸಂಭ್ರಮದಿಂದ ಆಚರಣೆ ಮಾಡುತ್ತಿದ್ದಾರೆ. ಅದೇ ರೀತಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಸಾಮೂಹಿಕವಾಗಿ ಪ್ರಾರ್ಥನೆಯಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರೂ ಕೂಡ ಭಾಗಿಯಾಗಿದ್ದರು.
24
ಪ್ರತ್ಯೇಕ ಎರಡು ಸಾಲುಗಳಲ್ಲಿ ಕುಳಿತು ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ.
34
ಪ್ರಾರ್ಥನೆ ಪೂರ್ವದಲ್ಲಿ ಮಾತನಾಡಿದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು, ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ. ಅಭಿವೃದ್ಧಿ ಕಾರ್ಯಗಳನ್ನ ಮಾಡುತ್ತೇವೆ. ಹಣ ಕೇಳಬೇಡಿ, ಅಭಿವೃದ್ಧಿಗಾಗಿ ಶ್ರಮಿಸುವೆ. ಶಾಂತಿ ಹೌಹಾರ್ಧತೆ ಕಾಪಾಡಿ ಅಂತ ತಿಳಿಸಿದ್ದಾರೆ.
44
ನಂತರ ಶಾಸಕ ಗಾಲಿ ಜನಾರ್ದನ ರೆಡ್ಡಿ, ಮಾಜಿ ಸಚಿವ ಅನ್ಸಾರಿ ಅವರು ಮುಸ್ಲಿಂ ಬಾಂಧವರಿಗೆ ಪ್ರತ್ಯೇಕವಾಗಿ ಶುಭ ಕೋರಿದ್ದಾರೆ.