ಸಂಪ್ರದಾಯದಂತೆ ಧರ್ಮರಾಯಸ್ವಾಮಿ ದೇವಾಲಯದಿಂದ ಮಧ್ಯರಾತ್ರಿ ಬಿಜಯ ಮಾಡಿಸಿ ಹೊರಡುವ ಕರಗ ಉತ್ಸವ ಹಲಸೂರು ಪೇಟೆಯ ಆಂಜನೇಯಸ್ವಾಮಿ, ಶ್ರೀ ರಾಮ ದೇವಾಲಯದಲ್ಲಿ ಪೂಜೆ ಸ್ವೀಕರಿಸಿ, ನಗರ್ತಪೇಟೆ, ಸಿದ್ದಣ್ಣ ಗಲ್ಲಿ, ಕಬ್ಬನ್ಪೇಟೆ, ಗಾಣಿಗರಪೇಟೆ, ದೊಡ್ಡಪೇಟೆಯಿಂದ ಕೆ.ಆರ್. ಮಾರುಕಟ್ಟೆ ತಲುಪಿ ಈ ಮಾರ್ಗಗಳಲ್ಲಿನ ಎಲ್ಲಾ ದೇವಾಲಯಗಳಲ್ಲಿ ಪೂಜೆ ಸ್ವೀಕರಿಸಿ ನಂತರ ಮಸ್ತಾನ್ ಸಾಹೇಬರ ದರ್ಗಾಕ್ಕೆ ಭೇಟಿ ನೀಡಿ, ಅಲ್ಲಿಂದ ಬಳೇಪೇಟೆ ಹಳೇಗರಡಿ, ಅಣ್ಣಮ್ಮನ ದೇವಾಲಯಕ್ಕೆ ತೆರಳುತ್ತದೆ.