ಶ್ರೀಕೃಷ್ಣ ಮಠದಲ್ಲಿ ಲಕ್ಷ ದೀಪೋತ್ಸವ ಆರಂಭ: ರಥಬೀದಿ ಸುಂದರ ಚಿತ್ರಗಳು ಇಲ್ಲಿವೆ, ಕಣ್ತುಂಬಿಕೊಳ್ಳಿ!

Published : Nov 14, 2024, 02:40 PM IST

ಅಪರೂಪದ ಸಂಪ್ರದಾಯಗಳಿಗೆ ಹೆಸರಾದ ಉಡುಪಿಯ ಕೃಷ್ಣಮಠ‌ದಲ್ಲಿ ಲಕ್ಷದೀಪಗಳಿಂದ ಸಂಭ್ರಮ. ಕಡಗೋಲು ಕೃಷ್ಣನ ಮೊದಲ ರಥೋತ್ಸವಕ್ಕೆ ಅಷ್ಟಮಠಗಳ ರಥಬೀದಿ ಅಲಂಕಾರಗೊಂಡು ಹಣತೆಯ ದೀಪಗಳಿಂದ ಕಂಗೊಳಿಸುತ್ತಿದೆ

PREV
18
ಶ್ರೀಕೃಷ್ಣ ಮಠದಲ್ಲಿ ಲಕ್ಷ ದೀಪೋತ್ಸವ ಆರಂಭ: ರಥಬೀದಿ ಸುಂದರ ಚಿತ್ರಗಳು ಇಲ್ಲಿವೆ, ಕಣ್ತುಂಬಿಕೊಳ್ಳಿ!

 ಮಠಾಧೀಶರ ಉಪಸ್ಥಿತಿಯಲ್ಲಿ ವೈಭವದ ನಡುವೆ ಕೃಷ್ಣನ ದೇವರ ಮೆರವಣಿಗೆ ನಡೆಸಲಾಯ್ತು. ರಥಬೀದಿಯಲ್ಲಿ ಲಕ್ಷದೀಪೋತ್ಸವ ಕಂಡು ಭಕ್ತರು ಸಂತಸಗೊಂಡರು

28

ದೇವರ ಸ್ವಾಗತಕ್ಕೆ ಉಡುಪಿಯ ಅಷ್ಟಮಠಗಳ ರಥಬೀದಿ ದೀಪಗಳಿಂದ ಕಂಗೊಳಿಸುತ್ತಿದ್ದು, ಭಕ್ತರು ಕೃಷ್ಣನಿಗೆ ಹಣತೆಯಲ್ಲಿ ದೀಪ ಬೆಳಗಿ ಸಂಭ್ರಮಿಸಿದರು.ಕೃಷ್ಣ ದೇವರು ಯೋಗ ನಿದ್ರೆಯಲ್ಲಿರ್ತಾನೆ ಅನ್ನೋದು ನಂಬಿಕೆ. 

38

ಉತ್ಥಾನ ದ್ವಾದಶಿಯ ದಿನ ಯೋಗ ನಿದ್ರೆ ಪೂರೈಸಿ ರಥಬೀದಿಗೆ ಬರುವ ದೇವರನ್ನು ಬರಮಾಡಿಕೊಳ್ಳಲು ನಡೆದಿರುವ ತಯಾರಿ ಇದು. ಈ ಮಹೋತ್ಸವವನ್ನು ಲಕ್ಷದೀಪೋತ್ಸವ ಎನ್ನುತ್ತಾರೆ. 

48

ಇಳಿ ಹೊತ್ತಿನಲ್ಲಿ ಭಕ್ತರೆಲ್ಲರೂ ರಥಬೀದಿಯಲ್ಲಿ ಸೇರಿ ಸಾವಿರಾರು ದೀಪ ಬೆಳಗಿದರು. ಮಧ್ವ ಸರೋವರದಲ್ಲಿ ಕ್ಷೀರಾಬ್ದಿ ಪೂಜೆ ನಡೆಯಿತು. ಆ ಬಳಿಕ ಮಠದಿಂದ ಹೊರ ಬರುವ ಕೃಷ್ಣ ದೇವರ ಉತ್ಸವ ಮೂರ್ತಿಯನ್ನು ಮಧ್ವ ಸರೋವರಕ್ಕೆ ಕೊಂಡೊಯ್ಯಲಾಯ್ತು

58

ಸಾಲು ಸಾಲು ದೀಪಗಳ ನಡುವೆ ಕೃಷ್ಣ ದೇವರ ಮೆರವಣಿಗೆ ನಡೆಯಿತು. ರಥದ ಮುಂಭಾಗದಲ್ಲಿ  ಚಂಡೆಗಳ ನಾದ ವೈಭವ ಮೇಳೈಸಿತು. ಈ ಬಾರಿಯ ಲಕ್ಷ ದೀಪೋತ್ಸವದಲ್ಲಿ ಪರ್ಯಾಯ ಪುತ್ತಿಗೆ ಶ್ರೀಗಳ ಸಹಿತ ನೂರಾರು ಭಕ್ತರು ಸೇರಿ ಎರಡೂ ರಥಗಳನ್ನು ಎಳೆದರು.  

68

ಮುಂದಿನ ಮೂರು ದಿನಗಳ ಕಾಲ ಸಮಾನ ವೈಭವದಿಂದ ಲಕ್ಷ ದೀಪೋತ್ಸವ ನಡೆಯುತ್ತೆ. ಲಕ್ಷದೀಪೋತ್ಸವದೊಂದಿಗೆ ಆರಂಭವಾಗುವ ಕೃಷ್ಣ ದೇವರ ರಥೋತ್ಸವ ಮುಂದಿನ ಮಳೆಗಾಲದವರೆಗೆ  ನಡೆಯುತ್ತೆ. 

78

ರಥಬೀದಿಯಲ್ಲಿ ಕಾಯುತ್ತಿದ್ದ ಸಾವಿರಾರು ಮಂದಿ ಭಕ್ತರು ಭಕ್ತಿಯಿಂದ ಲಕ್ಷ ದೀಪಗಳನ್ನು ಹಚ್ಚಿದರು. ಪರ್ಯಾಯ ಶ್ರೀಗಳ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ರಥೋತ್ಸವ ನಡೆಯಿತು.

88

ಅಷ್ಟಮಠಗಳ ರಥಬೀದಿಯಲ್ಲಿ ಸೇವಾರೂಪದಲ್ಲಿ ನಡೆಯುವ ಉತ್ಸವದಿಂದ ದಿನವೂ ಹಬ್ಬದ ವಾತಾವರಣ ಇರುತ್ತೆ. ಉಡುಪಿ ಸೇರಿದಂತೆ ಇತರೆಡೆಯಿಂದ ಸಾವಿರಾರು ಭಕ್ತರು ಆಗಮಿಸಿದ್ದರು.

Read more Photos on
click me!

Recommended Stories