ಹೊಸ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ. ಹಿಂದೂ ಧರ್ಮದಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಸೂರ್ಯನು ಧನು ರಾಶಿಯನ್ನು ತೊರೆದು ಮಕರ ರಾಶಿಯನ್ನು ಪ್ರವೇಶಿಸಿದಾಗ, ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ.ಈ ದಿನದಿಂದ ಉತ್ತರಾಯಣ ಪ್ರಾರಂಭವಾಗುತ್ತದೆ.ಈ ದಿನ, ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ, ಆದ್ದರಿಂದ ಹಬ್ಬವನ್ನು ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ.