ವೃಷಭ ರಾಶಿಯ ಹನ್ನೊಂದನೇ ಮನೆಯಲ್ಲಿ ರಾಹು ಮತ್ತು ಸೂರ್ಯ ಸಂಯೋಗವಿದೆ. ಇವರಿಗೆ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸನ್ನು ಸಾಧಿಸುವ ಸಾಧ್ಯತೆಯಿದೆ. ನಿಮ್ಮ ಆಲೋಚನಾ ಕ್ರಮವು ಇತರರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಬಹುದು. ನಿಮ್ಮ ಕೆಲಸವನ್ನು ಕಚೇರಿಯಲ್ಲಿ ಪ್ರಶಂಸಿಸಲಾಗುತ್ತದೆ. ಮೇಲಾಗಿ ಮುಂದಿನ ದಿನಗಳಲ್ಲಿ ಬಡ್ತಿ ಹಾಗೂ ಇನ್‌ಕ್ರಿಮೆಂಟ್ ಸಿಗುವ ಸಾಧ್ಯತೆ ಇದೆ.