ಬಾಳೆಹಣ್ಣಿನ ಚಹಾ ಕುಡಿದ್ರೆ ರಕ್ತದೊತ್ತಡ ಕಡಿಮೆಯಾಗುತ್ತೆ

First Published Aug 5, 2022, 12:14 PM IST

ನೀವು ಬಾಳೆಹಣ್ಣಿನ ಚಹಾದ ಬಗ್ಗೆ ಕೇಳಿದ್ದೀರಾ? ಬಾಳೆಹಣ್ಣಿನ ಚಹಾವು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಎಂದು ಅನೇಕರಿಗೆ ತಿಳಿದಿಲ್ಲ. ಇದು ಉತ್ತಮ ಜೀವನಶೈಲಿಯನ್ನು ಬದಲಾಯಿಸಲು ನಮಗೆ ಸಹಾಯ ಮಾಡುತ್ತದೆ.

ಬಾಳೆಹಣ್ಣಿನ ಚಹಾದ ಮುಖ್ಯ ಲಕ್ಷಣವೆಂದರೆ ಅದು ಉತ್ತಮ ನಿದ್ರೆ ಪಡೆಯಲು ಸಹಾಯ ಮಾಡುತ್ತದೆ. ಬಾಳೆಹಣ್ಣಿನ ಚಹಾವು ಟ್ರಿಪ್ಟೊಫಾನ್, ಸಿರೊಟೋನಿನ್ ಮತ್ತು ಡೋಪಮೈನ್ ಅನ್ನು ಹೊಂದಿರುತ್ತದೆ, ಇದು ಸ್ನಾಯುಗಳನ್ನು ವಿಶ್ರಾಂತಿ ಮಾಡುತ್ತದೆ.  ಮಾತ್ರವಲ್ಲ ಒತ್ತಡ ಮತ್ತು ಆತಂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ತೋರಿಸುತ್ತವೆ.

ಹಣ್ಣಿನಲ್ಲಿರುವ ವಿಟಮಿನ್ ಬಿ6 ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.  ಹೀಗಾಗಿ ಕಾಯಿಲೆ ಬಿದ್ದರೂ ಶೀಘ್ರವಾಗಿ ಚೇತರಿಸಿಕೊಳ್ಳಲು ಸಾಧ್ಯವಾಗುತ್ತದೆ. ಬಾಳೆಹಣ್ಣಿನ ಟೀ ಹೃದ್ರೋಗಿಗಳಿಗೂ ತುಂಬಾ ಒಳ್ಳೆಯದು ಎನ್ನುತ್ತಾರೆ ಸಂಶೋಧಕರು.

ಬಾಳೆಹಣ್ಣಿನಲ್ಲಿ ಮೆಗ್ನೀಸಿಯಮ್ ಕೂಡ ಸಮೃದ್ಧವಾಗಿದೆ. ಆದ್ದರಿಂದ ಇದು ಮೂಳೆಗಳ ಬಲವನ್ನು ಹೆಚ್ಚಿಸಲು ಮತ್ತು ಅವುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ದೇಹದ ಜೀರ್ಣಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಬಾಳೆಹಣ್ಣಿನ ಚಹಾವು ಸ್ನಾಯುವಿನ ಒತ್ತಡ ಮತ್ತು ಉಬ್ಬುವಿಕೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಮ್ ಅಪಧಮನಿಗಳು ಮತ್ತು ರಕ್ತನಾಳಗಳಲ್ಲಿನ ಒತ್ತಡವನ್ನು ಸಮತೋಲನಗೊಳಿಸುವ ಮೂಲಕ ದೇಹದ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲ, ಬಾಳೆಹಣ್ಣಿನ ಚಹಾವು ಡೋಪಮೈನ್ ಮತ್ತು ಸಿರೊಟೋನಿನ್ ಅನ್ನು ಹೊಂದಿರುತ್ತದೆ. ಈ ಹಾರ್ಮೋನುಗಳು ಮನಸ್ಸನ್ನು ಒತ್ತಡದಿಂದ ಮುಕ್ತವಾಗಿ ಮತ್ತು ಸಂತೋಷವಾಗಿರಿಸಲು ಸಹಾಯ ಮಾಡುತ್ತದೆ.
 

ಬಾಳೆಹಣ್ಣಿನಲ್ಲಿ ಇರುವ ಆ್ಯಂಟಿಆಕ್ಸಿಡೆಂಟ್‌ಗಳು, ವಿಟಮಿನ್ ಎ ಮತ್ತು ವಿಟಮಿನ್ ಸಿ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಬಾಳೆಹಣ್ಣು ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು. ಇದು ರೆಟಿನಾದಲ್ಲಿ ಮ್ಯಾಕ್ಯುಲರ್ ಡಿಜೆನರೇಶನ್, ಕಣ್ಣಿನ ಪೊರೆ ಮತ್ತು ಆಕ್ಸಿಡೇಟಿವ್ ಒತ್ತಡದ ಅಪಾಯವನ್ನು ಕಡಿಮೆ ಮಾಡುತ್ತದೆ.

ಬಾಳೆಹಣ್ಣಿನ ಟೀ ಮಾಡುವುದು ಹೇಗೆ ? 
ಬಾಳೆಹಣ್ಣನ್ನು ಸಿಪ್ಪೆಯೊಂದಿಗೆ ಅಥವಾ ಇಲ್ಲದೆ ನೀರಿನಲ್ಲಿ ಕುದಿಸಿ. ನಂತರ ನೀರಿನಿಂದ ಬಾಳೆಹಣ್ಣಿನ್ನು ತೆಗೆದುಹಾಕಿ. ನಂತರ ಆ ನೀರನ್ನು ಬ್ಲ್ಯಾಕ್ ಟೀ ಅಥವಾ ಹಾಲಿನ ಟೀ ಜೊತೆಗೆ ಮಿಕ್ಸ್ ಮಾಡಿ ಕುಡಿಯಿರಿ.

click me!