ತ್ವಚೆಯ ಆರೈಕೆಗೆ ಎಲ್ಲರೂ ಹೆಚ್ಚು ಒತ್ತು ನೀಡುತ್ತಾರೆ. ಆದರೆ ಕೇವಲ ದುಬಾರಿ ಕ್ರೀಮ್‌ಗಳನ್ನು ಹಚ್ಚುವುದರಿಂದ, ಟ್ರೀಟ್‌ಮೆಂಟ್ ತೆಗೆದುಕೊಳ್ಳುವುದರಿಂದ ಮಾತ್ರ ಪ್ರಯೋಜನವಿಲ್ಲ. ತ್ವಚೆ ಒಳಗಿನಿಂದಲೇ ಆರೋಗ್ಯವಾಗಿರಲು ಪೌಷ್ಟಿಕಾಂಶವಿರುವ ಆಹಾರಗಳನ್ನು ಸೇವಿಸುವುದು ಬಹಳ ಮುಖ್ಯ. ಹಾಗಿದ್ರೆ ಏನ್ ತಿನ್ಬೇಕು?
ಕೇವಲ ದುಬಾರಿ ಕ್ರೀಮ್‌ಗಳನ್ನು ಹಚ್ಚುವುದರಿಂದ, ಟ್ರೀಟ್‌ಮೆಂಟ್ ತೆಗೆದುಕೊಳ್ಳುವುದರಿಂದ ಮಾತ್ರ ಪ್ರಯೋಜನವಿಲ್ಲ. ತ್ವಚೆ ಒಳಗಿನಿಂದಲೇ ಆರೋಗ್ಯವಾಗಿರಲು ಪೌಷ್ಟಿಕಾಂಶವಿರುವ ಆಹಾರಗಳನ್ನು ಸೇವಿಸುವುದು ಬಹಳ ಮುಖ್ಯ. ಹಾಗಿದ್ರೆ ಏನ್ ತಿನ್ಬೇಕು? ನೋಡಿ..
26
ಕುಂಬಳಕಾಯಿ ಬೀಜಗಳಲ್ಲಿ ಜಿಂಕ್ ಮತ್ತು ಅಗತ್ಯ ಖನಿಜಾಂಶಗಳು ಹೇರಳವಾಗಿವೆ. ಇವು ಚರ್ಮದಲ್ಲಿ ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸಿ, ತ್ವಚೆಯನ್ನು ಯೌವನಯುತವಾಗಿಡಲು ನೆರವಾಗುತ್ತವೆ.
36
ಸಾಲ್ಮನ್, ಬಂಗುಡೆ ಮತ್ತು ಮತ್ತಿಯಂತಹ ಮೀನುಗಳಲ್ಲಿ ಪ್ರೋಟೀನ್ ಹಾಗೂ ಅಮೈನೋ ಆಸಿಡ್‌ಗಳು ಹೇರಾಳವಾಗಿವೆ. ಇವು ತ್ವಚೆಯ ಜೊತೆಗೆ ಹೃದಯ ಮತ್ತು ಮೆದುಳಿನ ಆರೋಗ್ಯಕ್ಕೂ ಬಹಳ ಒಳ್ಳೆಯದು.
ಮೊಟ್ಟೆಯಲ್ಲಿ ಪ್ರೋಟೀನ್ ಮತ್ತು ಅಮೈನೋ ಆಸಿಡ್‌ಗಳು ಹೆಚ್ಚಿನ ಪ್ರಮಾಣದಲ್ಲಿವೆ. ಇವು ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ತ್ವಚೆ ಹಾಗೂ ಒಟ್ಟಾರೆ ದೇಹದ ಆರೋಗ್ಯವನ್ನು ಸುಧಾರಿಸುತ್ತವೆ.
56
ಕಿತ್ತಳೆ, ನಿಂಬೆ ಮತ್ತು ದ್ರಾಕ್ಷಿಯಂತಹ ಸಿಟ್ರಸ್ ಹಣ್ಣುಗಳು ವಿಟಮಿನ್ ಸಿ ಯಿಂದ ಸಮೃದ್ಧವಾಗಿವೆ. ಪ್ರತಿದಿನ ಇವುಗಳನ್ನು ಸೇವಿಸುವುದರಿಂದ ತ್ವಚೆಯ ಕಾಂತಿ ಮತ್ತು ಆರೋಗ್ಯ ವೃದ್ಧಿಯಾಗುತ್ತದೆ.
66
ಬೆಟ್ಟದ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಮತ್ತು ಆ್ಯಂಟಿಆಕ್ಸಿಡೆಂಟ್ ಗುಣಗಳು ಹೇರಳವಾಗಿವೆ. ಇವು ತ್ವಚೆಯಲ್ಲಿ ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸಿ, ಚರ್ಮದ ಆರೋಗ್ಯವನ್ನು ಕಾಪಾಡುತ್ತವೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.