ಮಳೆಗಾಲ ಬರುತ್ತಿದ್ದಂತೆ ಆರೋಗ್ಯದ ಮೇಲೆ ಗಮನಾರ್ಹ ಋಣಾತ್ಮಕ ಪರಿಣಾಮ ಬೀರುತ್ತದೆ. ಈ ಋತುವಿನಲ್ಲಿ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಸಹ ಬರುತ್ತವೆ. ಹಾಗಾಗಿ ನಾವು ತಿನ್ನುವ ಆಹಾರದ ಬಗ್ಗೆ ಎಚ್ಚರ ವಹಿಸಬೇಕು. ಇಲ್ಲವಾದರೆ, ನೀವೂ ಕೂಡ ಆರೋಗ್ಯ ಸಮಸ್ಯೆಗಳಿಗೆ ಗುರಿಯಾಗುವಿರಿ.
ಮಳೆಗಾಲದಲ್ಲಿ ನೀವು ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಈ ಸಮಯದಲ್ಲಿ ಫುಡ್ ಪಾಯ್ಸನ್, ಹೊಟ್ಟೆ ಸೋಂಕು, ಅತಿಸಾರ, ಟೈಫಾಯಿಡ್ ಮತ್ತು ವೈರಲ್ ಜ್ವರದಂತಹ ಕಾಯಿಲೆಗಳ ಅಪಾಯ ಹೆಚ್ಚಾಗಿರುತ್ತದೆ. ನಾವು ಅರ್ಥಮಾಡಿಕೊಂಡು ಸಮಯಕ್ಕೆ ತಕ್ಕಂತೆ ಬದಲಾವಣೆಗಳನ್ನು ಮಾಡಿದರೆ, ಈ ಕಾಯಿಲೆಗಳನ್ನು ತಪ್ಪಿಸಬಹುದು. ಹಾಗಿದ್ರೆ ಮಳೆಗಾಲದಲ್ಲಿ ಯಾವ ಆಹಾರ ಸೇವಿಸಬಾರದು ನೋಡೋಣ.
25
ಹಸಿ ಸಲಾಡ್
ನೀವು ಹಸಿ ಸಲಾಡ್ ತಿನ್ನುವುದನ್ನು ಇಷ್ಟಪಟ್ಟಿದ್ದರೆ, ಮಳೆಗಾಲದಲ್ಲಿ ಅವುಗಳನ್ನು ತಿನ್ನುವುದನ್ನು ಅವಾಯ್ಡ್ ಮಾಡಿ. ಹಸಿ ತರಕಾರಿಗಳಲ್ಲಿ ಬ್ಯಾಕ್ಟೀರಿಯಾ ಅಥವಾ ಕಲುಷಿತ ನೀರು ಅಧಿಕವಾಗಿದ್ದು, ಇದು ವಿವಿಧ ಕಾಯಿಲೆಗಳಿಗೆ ಕಾರಣವಾಗಬಹುದು. ಅವುಗಳನ್ನು ತಿನ್ನುವುದರಿಂದ ಹೊಟ್ಟೆಯಲ್ಲಿ ತೀವ್ರ ತೊಂದರೆ ಉಂಟಾಗಬಹುದು ಮತ್ತು ಬ್ಯಾಕ್ಟೀರಿಯಾದ ಸೋಂಕುಗಳಿಗೂ ಕಾರಣವಾಗಬಹುದು.
35
ಸಮುದ್ರಾಹಾರ
ನೀವು ಹೆಚ್ಚಿನ ಪ್ರಮಾಣದಲ್ಲಿ ಸೀ ಫುಡ್ ಸೇವಿಸುವುದನ್ನು ತಪ್ಪಿಸಬೇಕು. ಮಳೆಗಾಲದಲ್ಲಿ ಮೀನುಗಾರಿಕೆ ಮಾಡುವುದು ಕಡಿಮೆಯಾಗುತ್ತದೆ. ಈ ಸಮಯದಲ್ಲಿ ಹಳೆಯ ಮೀನುಗಳ ಮಾರಾಟ ಮಾಡಲಾಗುತ್ತದೆ. ತಾಜಾವಲ್ಲದ ಸಮುದ್ರಾಹಾರವು ಫುಡ್ ಪಾಯ್ಸನ್ ಮತ್ತು ಹೊಟ್ಟೆಯ ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಎಚ್ಚರಿಕೆಯಿಂದ ಮೀನು ಖರೀದಿಸಿ.
ಮಳೆಗಾಲದಲ್ಲಿ ರಸ್ತೆ ಬದಿಯ ಅಂಗಡಿಗಳಿಂದ ಕತ್ತರಿಸಿದ ಹಣ್ಣುಗಳು ಮತ್ತು ಜ್ಯೂಸ್ ಸೇವಿಸುವುದನ್ನು ಅವಾಯ್ಡ್ ಮಾಡಿ. ಇವುಗಳನ್ನು ತಿನ್ನುವುದರಿಂದ ಆರೋಗ್ಯಕ್ಕೆ ಅಪಾಯ ಉಂಟಾಗುತ್ತದೆ. ಅವುಗಳಲ್ಲಿ ಬ್ಯಾಕ್ಟೀರಿಯಾಗಳು ಹೆಚ್ಚಿನ ಪ್ರಮಾಣದಲ್ಲಿ ಇರುತ್ತವೆ. ಫುಡ್ ಪಾಯ್ಸನ್ ಅಪಾಯವೂ ಹೆಚ್ಚಾಗಿರುತ್ತದೆ. ಹೊಟ್ಟೆಯ ಸೋಂಕು, ವಾಂತಿ ಮತ್ತು ಅತಿಸಾರ ಮತ್ತು ದೌರ್ಬಲ್ಯ ಉಂಟಾಗುವ ಸಾಧ್ಯತೆ ಇದೆ.
55
ಬೀದಿ ಆಹಾರ ಮತ್ತು ತೆರೆದ ಆಹಾರ
ಮಳೆಗಾಲದಲ್ಲಿ ಜನರು ಸ್ಟ್ರೀಟ್ ಫುಡ್ ತಿನ್ನಲು ಇಷ್ಟಪಡುತ್ತಾರೆ, ಆದರೆ ಅದು ನಿಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಈ ಸಮಯದಲ್ಲಿ ನೀವು ಬೀದಿ ಆಹಾರ ಮತ್ತು ತೆರೆದ ಆಹಾರವನ್ನು ಸೇವಿಸುವುದನ್ನು ತಪ್ಪಿಸಬೇಕು. ಚಾಟ್, ಗೋಲ್ಗಪ್ಪಗಳು, ಸಮೋಸಾಗಳು, ಪಕೋಡಾಗಳು ಮತ್ತು ಇತರ ಅನೇಕ ಆಹಾರಗಳು ನಿಮ್ಮನ್ನು ತೀವ್ರ ಅಸ್ವಸ್ಥಗೊಳಿಸಬಹುದು. ಹಾಗಾಗಿ ಇವುಗಳಿಂದ ದೂರ ಇರಿ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.