ಪ್ರೋಟೀನ್ ನಮ್ಮ ದೇಹಕ್ಕೆ ಬಹಳ ಮುಖ್ಯವಾದ ಪೋಷಕಾಂಶಗಳಲ್ಲಿ ಒಂದು. ಇದು ಸ್ನಾಯುಗಳನ್ನು ಬಲಪಡಿಸಿ ದೇಹಕ್ಕೆ ಹೊಸ ಚೈತನ್ಯ ನೀಡುತ್ತದೆ. ನಾವು ತಿನ್ನುವ ಅನೇಕ ಆಹಾರ ಪದಾರ್ಥಗಳಲ್ಲಿ ಪ್ರೋಟೀನ್ ಸಮೃದ್ಧವಾಗಿದೆ. ನೀವು ಮಾಂಸಾಹಾರ ತಿನ್ನದೆ ಸಸ್ಯಹಾರ ಸೇವಿಸುವವರಾಗಿದ್ದರೆ, ನಿಮ್ಮ ಆಹಾರದಲ್ಲಿ ಪ್ರೋಟೀನ್ ಚೆನ್ನಾಗಿರಬೇಕು. ಇದಕ್ಕೆ ನಿಮ್ಮ ಆಹಾರದಲ್ಲಿ ಹೆಸರುಕಾಳನ್ನು ಸೇರಿಸಿ. ಏಕೆಂದರೆ ಸಸ್ಯಹಾರಿಗಳಿಗೆ ಹೆಸರುಕಾಳು ಪ್ರೋಟೀನ್‌ನ ಕಣಜವಾಗಿದೆ.
26
ಹೆಸರುಕಾಳು
ಇನ್ನೂ ಹೇಳಬೇಕೆಂದರೆ ಚಿಕನ್ ಮತ್ತು ಮಟನ್‌ಗಿಂತ ಹೆಸರುಕಾಳಿನಲ್ಲಿ ಹೆಚ್ಚಿನ ಪ್ರೋಟೀನ್ ಇದೆ ಎಂದು ತಜ್ಞರು ಹೇಳುತ್ತಾರೆ. ಮಕ್ಕಳು, ದೊಡ್ಡವರು ಎಲ್ಲರೂ ಆರೋಗ್ಯವಾಗಿರಲು ಪ್ರೋಟೀನ್ ಸಹಾಯ ಮಾಡುತ್ತದೆ. ಇದನ್ನು ತಿನ್ನುವುದರಿಂದ ದೇಹವನ್ನು ಬಲವಾಗಿಡಲು ಸಹಾಯ ಮಾಡುತ್ತದೆ.
ಜನರು ತಮ್ಮ ಆಹಾರದಲ್ಲಿ ವಾರಕ್ಕೆ 2-3 ಬಾರಿ ಹೆಸರುಕಾಳನ್ನು ಸೇರಿಸಿಕೊಳ್ಳಬೇಕು. ಏಕೆಂದರೆ ಈ ಕಾಳಿನಲ್ಲಿ ಮಾಂಸಕ್ಕಿಂತ ಹೆಚ್ಚಿನ ಪ್ರೋಟೀನ್ ಇದೆ. ಹೆಸರುಕಾಳು ತಿನ್ನುವುದರಿಂದ ಸ್ನಾಯುಗಳು ಮತ್ತು ಮೂಳೆಗಳು ಬಲಗೊಳ್ಳುತ್ತವೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.
36
ಹೆಸರುಕಾಳಿನಲ್ಲಿರುವ ಪೋಷಕಾಂಶಗಳು:
ಹೆಸರುಕಾಳಿನಲ್ಲಿ ಪ್ರೋಟೀನ್ ಹೊರತುಪಡಿಸಿ ಫೈಬರ್, ವಿಟಮಿನ್ ಎ, ಬಿ, ಸಿ ಮತ್ತು ಇ, ಕಬ್ಬಿಣ, ಪೊಟ್ಯಾಸಿಯಮ್, ಮೆಗ್ನೀಸಿಯಮ್‌ನ ಉತ್ತಮ ಮೂಲವಾಗಿದೆ. ಇದರಲ್ಲಿರುವ ಪೋಷಕಾಂಶಗಳು ನಮ್ಮ ದೇಹಕ್ಕೆ ಬಹಳ ಮುಖ್ಯ.
46
ಹೆಸರುಕಾಳು ಪ್ರಯೋಜನಗಳು:
1. ಹೆಸರುಕಾಳು ಸುಲಭವಾಗಿ ಜೀರ್ಣವಾಗುತ್ತದೆ. ಇದು ಹೊಟ್ಟೆಗೆ ತುಂಬಾ ಒಳ್ಳೆಯದು. ಇದರಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಆದ್ದರಿಂದ ಮಲಬದ್ಧತೆ ಸಮಸ್ಯೆ ಇದ್ದರೆ ಹೆಸರುಕಾಳು ತಿನ್ನಿ.
2. ಹೆಸರುಕಾಳು ನಿಮ್ಮ ಸ್ನಾಯುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದರಲ್ಲಿರುವ ಪ್ರೋಟೀನ್, ಫೈಬರ್, ಕಬ್ಬಿಣ, ಮೆಗ್ನೀಸಿಯಮ್, ತಾಮ್ರ, ಪೊಟ್ಯಾಸಿಯಮ್ ಮತ್ತು ವಿಟಮಿನ್‌ಗಳು ನಿಮ್ಮ ದೇಹಕ್ಕೆ ವರದಾನವಾಗಿದೆ.
3. ಹೆಸರುಕಾಳು ಹೃದಯಕ್ಕೆ ಒಳ್ಳೆಯದು ಎಂದು ಹೇಳಲಾಗುತ್ತದೆ. ಆದ್ದರಿಂದ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸುವುದರಿಂದ ಹೃದಯ ಸಂಬಂಧಿತ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ.
56
ಹೆಸರುಕಾಳು ಪ್ರಯೋಜನಗಳು:
4. ಹೆಸರುಕಾಳಿನಲ್ಲಿ ಪ್ರೋಟೀನ್‌ನಂತಹ ಪೋಷಕಾಂಶಗಳು ಇರುವುದರಿಂದ ಇದು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುವುದನ್ನು ತಡೆಯುತ್ತದೆ. ಇದರಿಂದ ನಿಮ್ಮ ದೇಹದಲ್ಲಿ ಯಾವುದೇ ರೀತಿಯ ಕೊಬ್ಬು ಸಂಗ್ರಹವಾಗುವುದಿಲ್ಲ. ಇದರಲ್ಲಿರುವ ಆಂಟಿ-ಆಕ್ಸಿಡೆಂಟ್‌ಗಳು ನಿಮ್ಮ ದೇಹದಲ್ಲಿ ಒಳ್ಳೆಯ ಕೊಬ್ಬನ್ನು ಹೆಚ್ಚಿಸುವ ಮೂಲಕ ಕೆಟ್ಟ ಕೊಬ್ಬನ್ನು ನಿಯಂತ್ರಿಸುತ್ತದೆ.
5. ಹೆಸರುಕಾಳಿನಲ್ಲಿ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಇರುವುದರಿಂದ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ. ಆದ್ದರಿಂದ ಈ ಕಾಳು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ.
66
ಹೆಸರುಕಾಳು ಪ್ರಯೋಜನಗಳು:
6. ಹೆಸರುಕಾಳಿನಲ್ಲಿರುವ ಆಂಟಿ ಆಕ್ಸಿಡೆಂಟ್‌ಗಳು ಚರ್ಮವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಇದು ಕಪ್ಪು ಕಲೆಗಳನ್ನು ಕಡಿಮೆ ಮಾಡಲು ಮತ್ತು ಚರ್ಮವನ್ನು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಇದು ಕೂದಲನ್ನು ಬಲಪಡಿಸಲು ಸಹಾಯ ಮಾಡುತ್ತದೆ.
7. ಹೆಸರುಕಾಳಿನಲ್ಲಿ ಕ್ಯಾಲೊರಿಗಳು ಕಡಿಮೆಯಿದ್ದು, ಫೈಬರ್ ಹೆಚ್ಚಾಗಿರುವುದರಿಂದ ತೂಕ ಇಳಿಕೆಗೆ ಸೂಕ್ತವಾದ ಆಹಾರವಾಗಿದೆ. ಇದರಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಮತ್ತು ಹಸಿವನ್ನು ಕಡಿಮೆ ಮಾಡಿ ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಭಾವನೆ ನೀಡುತ್ತದೆ. ಆದ್ದರಿಂದ ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಹೆಸರುಕಾಳು ತುಂಬಾ ಪ್ರಯೋಜನಕಾರಿ.