ಮಳೆಗಾಲದಲ್ಲಿ ಜೀರ್ಣಕ್ರಿಯೆ ನಿಧಾನವಾಗುವುದರಿಂದ ಆಹಾರದ ಆಯ್ಕೆ ಮುಖ್ಯವಾಗಿರುತ್ತದೆ. ಈ ಸಮಯದಲ್ಲಿ ಮೀನುಗಳ ಸಂತಾನೋತ್ಪತ್ತಿ ಕಾಲವಾಗಿದ್ದು, ನೀರಿನ ಮಾಲಿನ್ಯದಿಂದ ಸೋಂಕಿನ ಅಪಾಯವಿರುತ್ತದೆ. ಆದ್ದರಿಂದ, ತಜ್ಞರ ಪ್ರಕಾರ ಸರಿಯಾಗಿ ಸ್ವಚ್ಛಗೊಳಿಸಿದ ಚಿಕನ್ ಸೇವಿಸುವುದು ಮೀನಿಗಿಂತ ಉತ್ತಮ ಆಯ್ಕೆಯಾಗಿದೆ.
ಮಳೆಗಾಲ ಬರುತ್ತಿದ್ದಂತೆ ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳು ಅಧಿಕವಾಗಿರುತ್ತದೆ. ಮಕ್ಕಳ ಜೊತೆ ದೊಡ್ಡವರಲ್ಲಿ ಶೀತ ಸಂಬಂಧಿತ ರೋಗ, ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಹಾಗಾಗಿ ಈ ಸಮಯದಲ್ಲಿ ಯಾವ ಆಹಾರ ಸೇವಿಸಬೇಕು ಎಂಬುದರ ಬಗ್ಗೆ ಸ್ಪಷ್ಟವಾಗಿರಬೇಕು. ಸೇವಿಸುವ ಆಹಾರದಲ್ಲಿ ಕೊಂಚ ವ್ಯತ್ಯಾಸವಾದ್ರೂ ಅನಾರೋಗ್ಯಕ್ಕೆ ತುತ್ತಾಗಬೇಕಾಗುತ್ತದೆ.
25
ಪೌಷ್ಟಿಕಾಂಶ
ಮೀನುಗಳಲ್ಲಿ ಪ್ರೋಟೀನ್ ಮತ್ತು ಒಮೆಗಾ-3 ಕೊಬ್ಬಿನಾಮ್ಲಗಳಿವೆ. ಈ ಅಂಶಗಳು ಹೃದಯ ಮತ್ತು ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು. ಆದ್ರೆ ಮೀನು ಆಹಾರ ಜೀರ್ಣವಾಗಲು ಹೆಚ್ಚು ಸಮಯ ಬೇಕಾಗುತ್ತದೆ.
ಇನ್ನು ಚಿಕನ್‌ನಲ್ಲಿ ಗುಣಮಟ್ಟದ ಪ್ರೋಟೀನ್, ವಿಟಮಿನ್ ಬಿ6 ಮತ್ತು ಸತುವಿನಂಶಗಳನ್ನು ಹೊಂದಿರುತ್ತದೆ. ಈ ಅಂಶಗಳು ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಸ್ನಾಯುಗಳ ಬಲ ಕಾಪಾಡಿಕೊಳ್ಳಲು ಸಹಾಯ ಮಾಡುತ್ತವೆ.
35
ಮಳೆಗಾಲದಲ್ಲಿ ಜೀರ್ಣಕ್ರಿಯೆ ಹೇಗಿರುತ್ತೆ?
ಸಾಮಾನ್ಯ ದಿನಗಳಿಗಿಂತ ಮಳೆಗಾಲದಲ್ಲಿ ದೇಹದ ಚಯಾಪಚಯ (ಜೀರ್ಣ) ಕ್ರಿಯೆ ಸ್ವಲ್ಪ ನಿಧಾನವಾಗಿರುತ್ತದೆ. ಈ ಸಮಯದಲ್ಲಿ ಸೇವಿಸುವ ಹೆಚ್ಚು ಪೋಷಕಾಂಶಗಳ ಆಹಾರ ಸೇವಿಸಿದ್ರೆ ಜೀರ್ಣಕ್ರಿಯೆಗೆ ಹೆಚ್ಚಿನ ಸಮಯ ಬೇಕಾಗುತ್ತದೆ. ಅದರಲ್ಲೂ ಮಕ್ಕಳಿಗೆ ಜೀರ್ಣಕ್ರಿಯೆ ಕಷ್ಟವಾಗುವ ಸಾಧ್ಯತೆಗಳಿರುತ್ತವೆ.
ಮಳೆಗಾಲದಲ್ಲಿ ಮೀನು ಅಥವಾ ಚಿಕನ್‌ನಲ್ಲಿ ಯಾವುದು ಒಳ್ಳೆಯದು?
ಮಳೆಗಾಲದಲ್ಲಿ ಅತಿಯಾಗಿ ಸಮುದ್ರಾಹಾರ ಸೇವನೆ ಸೋಂಕಿನ ಅಪಾಯಕ್ಕೆ ಕಾರಣವಾಗುವ ಸಾಧ್ಯತೆ ಇರುತ್ತೆ. ಮಳೆಗಾಲವು ಮೀನುಗಳ ಸಂತಾನೋತ್ಪತ್ತಿ ಸಮಯವಾಗಿದ್ದು, ಜಲಚರಗಳ ದೇಹದಲ್ಲಿ ನೈಸರ್ಗಿಕ ಬದಲಾವಣೆ ಆಗುತ್ತಿರುತ್ತೆ. ಹಾಗೆಯೇ ಮಳೆಗಾಲದಲ್ಲಿ ನದಿಗಳು ಮತ್ತು ಕೊಳಗಳಲ್ಲಿನ ನೀರು ಕಲುಷಿತಗೊಳ್ಳುತ್ತದೆ. ಇದು ಸಹ ಮೀನುಗಳಲ್ಲಿ ಬ್ಯಾಕ್ಟಿರಿಯಾ ಮತ್ತು ಪರವಾಲಂಬಿ ಜೀವಿಗಳ ಅಪಾಯವನ್ನು ಹೆಚ್ಚಳ ಮಾಡುವ ಸಾಧ್ಯತೆಗಳಿರುತ್ತವೆ.
55
ಚಿಕನ್ ಒಳ್ಳೆಯದಾ?
ಮಳೆಗಾಲದಲ್ಲಿ ಮೀನುಗಳಿಗಿಂತ ಕೋಳಿಮಾಂಸ ಒಳ್ಳೆಯದು ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಮಳೆಗಾಲದಲ್ಲಿ ಕೋಳಿ ಸಾಕಾಣಿಕಾ ಕೇಂದ್ರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಹಾಗೆಯೇ ಫ್ರೆಶ್ ಕೋಳಿಮಾಂಸ ಸೇವನೆಗೆ ಆದ್ಯತೆ ನೀಡಬೇಕು. ಕೋಳಿಮಾಂಸವನ್ನು ಎರಡರಿಂದ ಮೂರು ಬಾರಿ ಬಿಸಿನೀರಿನಲ್ಲಿ ತೊಳೆಗೆ ಆಹಾರ ತಯಾರಿಸಬೇಕಾಗುತ್ತದೆ. ಒಂದು ವೇಳೆ ನೀವು ಫಿಶ್ ಲವರ್ ಆಗಿದ್ರೆ, ಫ್ರೆಶ್ ಫಿಶ್ ಖರೀದಿಸಿ ಮನೆಯಲ್ಲಿಯೇ ಅಡುಗೆ ಮಾಡಿಕೊಳ್ಳಿ
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.