ಮನೆಯಲ್ಲಿ ಶೇಖರಿಸಿದ ಮೊಸರನ್ನು ಸೇವಿಸಿ. ಸಮೃದ್ಧವಾಗಿರುವ ಕ್ಯಾಲ್ಸಿಯಂ, ವಿಟಮಿನ್, ಕ್ಯಾಲೊರಿ, ಪ್ರೋಟೀನ್‍ಗಳು ದೇಹಕ್ಕೆ ಸೂಕ್ತವಾದ ಪೋಷಣೆಯನ್ನು ನೀಡುತ್ತವೆ. ಆದರೆ ಇದನ್ನು ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ಸಮಯದಲ್ಲಿ ಸೇವಿಸಿದರೆ ಮಾತ್ರ ಆರೋಗ್ಯ ಉತ್ತಮವಾಗಿರುತ್ತದೆ. ಗ್ಯಾಸ್ಟ್ರಿಕ್, ಅಜೀರ್ಣ, ಮಲಬದ್ಧತೆ, ಹೊಟ್ಟೆಯ ಕಿರಿಕಿರಿ ಮೊದಲಾದ ಸಮಸ್ಯೆಗಳಿಗೂ ಇದು ಪರಿಹಾರ ನೀಡುತ್ತದೆ.