ಆರೋಗ್ಯವಾಗಿರಲು ಬೆಳಗ್ಗೆ ಆರೋಗ್ಯಕರ ಆಹಾರ ಸೇವಿಸಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ದಿನವಿಡೀ ದೇಹಕ್ಕೆ ಶಕ್ತಿ ದೊರೆಯುತ್ತದೆ. ವಿಶೇಷವಾಗಿ ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು.
ಕೆಟ್ಟ ಜೀವನಶೈಲಿಯಿಂದ ಉಂಟಾಗುವ ಕಾಯಿಲೆಗಳಲ್ಲಿ ಮಧುಮೇಹವೂ ಒಂದು. ಇದರಿಂದ ದೇಹದಲ್ಲಿ ರಕ್ತದ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ. ದೀರ್ಘಕಾಲದಿಂದ ಮಧುಮೇಹದಿಂದ ಬಳಲುತ್ತಿರುವವರು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಹಲವು ಪ್ರಯತ್ನಗಳನ್ನು ಮಾಡುತ್ತಾರೆ.
25
ಮಧುಮೇಹಿಗಳಿಗೆ ಆಹಾರ ಯೋಜನೆ
ಏಕೆಂದರೆ, ದೇಹದಲ್ಲಿ ರಕ್ತದ ಸಕ್ಕರೆ ಮಟ್ಟ ಹೆಚ್ಚಾದರೆ, ಅದು ಹೃದಯ, ಮೆದುಳು, ಮೂತ್ರಪಿಂಡ, ಯಕೃತ್ತು, ಕಣ್ಣು ಮುಂತಾದ ಇತರ ಅಂಗಗಳ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಅದನ್ನು ನಿಯಂತ್ರಿಸುವುದು ಬಹಳ ಮುಖ್ಯ.
ತಜ್ಞರ ಪ್ರಕಾರ, ಮಧುಮೇಹಿಗಳು ತಮ್ಮ ಆಹಾರದ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಲಭವಾಗಿ ನಿಯಂತ್ರಿಸಬಹುದು. ಹೆಚ್ಚಿನ ರಕ್ತದ ಸಕ್ಕರೆಯಿಂದ ಬಳಲುತ್ತಿರುವವರು ಆರೋಗ್ಯಕರ ಆಹಾರವನ್ನು ಅನುಸರಿಸಬೇಕೆಂದು ಸಲಹೆ ನೀಡಲಾಗುತ್ತದೆ. ಆದ್ದರಿಂದ ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಯಾವ ಆಹಾರಗಳನ್ನು ಸೇವಿಸಬೇಕು ಎಂಬುದನ್ನು ಇಲ್ಲಿ ನೋಡೋಣ.
35
ಮಧುಮೇಹ ನಿಯಂತ್ರಣ ಹೇಗೆ
ಮಧುಮೇಹಿಗಳು ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕಾದ ಆಹಾರಗಳು:
ತುಪ್ಪ ಮತ್ತು ಅರಿಶಿನ:
ಮಧುಮೇಹಿಗಳು ಒಂದು ಚಮಚ ತುಪ್ಪ ಮತ್ತು ಅರಿಶಿನವನ್ನು ಬೆರೆಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ರಕ್ತದಲ್ಲಿನ ಸಕ್ಕರೆಯ ಮಟ್ಟ ನಿಯಂತ್ರಣದಲ್ಲಿರುತ್ತದೆ. ತುಪ್ಪ ದಿನವಿಡೀ ಸಿಹಿ ತಿನ್ನುವ ಆಸೆಯನ್ನು ಕಡಿಮೆ ಮಾಡುತ್ತದೆ. ಅರಿಶಿನ ಉರಿಯೂತವನ್ನು ಕಡಿಮೆ ಮಾಡುತ್ತದೆ.
ಚಕ್ಕೆ ನೀರು:
ಚಕ್ಕೆ ಅಡುಗೆಮನೆಯಲ್ಲಿ ಬಳಸುವ ಮಸಾಲೆ ಪದಾರ್ಥ. ಇದು ದೇಹದಲ್ಲಿನ ರಕ್ತದ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಕ್ಕಾಗಿ ಒಂದು ಲೋಟ ನೀರಿನಲ್ಲಿ ಚಕ್ಕೆಯನ್ನು ನೆನೆಸಿಟ್ಟು ಮರುದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಬೇಕಾದರೆ ಈ ನೀರಿನಲ್ಲಿ ಚಹಾವನ್ನೂ ಕೂಡ ಮಾಡಬಹುದು. ಇದರಿಂದ ರಕ್ತದ ಸಕ್ಕರೆ ಮಟ್ಟದ ಏರಿಳಿತಗಳು ನಿಯಂತ್ರಣದಲ್ಲಿರುತ್ತವೆ.
45
ಮಧುಮೇಹ ಪೋಷಣೆ
ಮೆಂತ್ಯ ನೀರು:
ಮಧುಮೇಹಿಗಳು ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಮೆಂತ್ಯ ನೀರು ಕುಡಿಯುವುದು ತುಂಬಾ ಒಳ್ಳೆಯದು. ಇದಕ್ಕಾಗಿ ರಾತ್ರಿ ಮಲಗುವ ಮುನ್ನ ಒಂದು ಚಮಚ ಮೆಂತ್ಯವನ್ನು ನೀರಿನಲ್ಲಿ ನೆನೆಸಿಟ್ಟು ಬೆಳಗ್ಗೆ ಮೆಂತ್ಯದೊಂದಿಗೆ ನೀರನ್ನು ಕುಡಿಯಬೇಕು.
ನೆನೆಸಿದ ಒಣ ಹಣ್ಣುಗಳು
ಮಧುಮೇಹಿಗಳು ಬೆಳಗ್ಗೆ ಎದ್ದ ತಕ್ಷಣ ದೇಹದಲ್ಲಿ ರಕ್ತದ ಸಕ್ಕರೆ ಮಟ್ಟ ಕಡಿಮೆಯಾಗಿದೆ ಎಂದು ಭಾವಿಸಿದರೆ, ತಕ್ಷಣ ಖಾಲಿ ಹೊಟ್ಟೆಯಲ್ಲಿ ಪ್ರೋಟೀನ್ ಸೇವಿಸಿ. ಅಂದರೆ ನೆನೆಸಿದ ಬಾದಾಮಿ, ವಾಲ್ನಟ್ ಮುಂತಾದ ಒಣ ಹಣ್ಣುಗಳನ್ನು ಸೇವಿಸಿ.
55
ಮಧುಮೇಹಿಗಳಿಗೆ ಖಾಲಿ ಹೊಟ್ಟೆ ಆಹಾರ
ನೆಲ್ಲಿಕಾಯಿ ರಸ:
ಟೈಪ್ 2 ಮಧುಮೇಹಿಗಳು ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ದೇಹವನ್ನು ನಿರ್ವಿಷಗೊಳಿಸುವ ಪಾನೀಯವನ್ನು ಕುಡಿಯುವುದು ತುಂಬಾ ಒಳ್ಳೆಯದು. ಇದರಿಂದ ರಕ್ತದ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ. ಇದಕ್ಕಾಗಿ 100 ಮಿಲಿ ನೀರಿನಲ್ಲಿ, 30 ಮಿಲಿ ನೆಲ್ಲಿಕಾಯಿ ರಸ ಮತ್ತು ಒಂದು ಚಮಚ ಆಪಲ್ ಸೈಡರ್ ವಿನೆಗರ್ ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಇದರಿಂದ ರಕ್ತದ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. ನಿಮ್ಮಲ್ಲಿ ನೆಲ್ಲಿಕಾಯಿ ಇಲ್ಲದಿದ್ದರೆ ನಿಂಬೆಹಣ್ಣನ್ನು ಬಳಸಬಹುದು.
Disclaimer: ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಹಾಗಾಗಿ ಇದನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ದೃಢೀಕರಿಸುವದಿಲ್ಲ.