ಖರ್ಜೂರ ತಿನ್ನುವುದರಿಂದ ಆಗುವ ಲಾಭಗಳು
ಕಬ್ಬಿಣದ ಆಗರ: ಖರ್ಜೂರದಲ್ಲಿ ಕಬ್ಬಿಣಾಂಶ ಹೇರಳವಾಗಿದ್ದು, ರಕ್ತಹೀನತೆಯಿಂದ ಬಳಲುತ್ತಿರುವವರಿಗೆ ಪ್ರಯೋಜನಕಾರಿ.
ಮೂಳೆಗಳನ್ನು ಬಲಪಡಿಸುತ್ತದೆ: ಕ್ಯಾಲ್ಸಿಯಂ, ರಂಜಕ ಮತ್ತು ಮೆಗ್ನೀಸಿಯಮ್ ಇದ್ದು ಮೂಳೆಗಳ ಆರೋಗ್ಯವನ್ನು ಸುಧಾರಿಸುತ್ತದೆ.
ಶಕ್ತಿವರ್ಧಕ: ಗ್ಲೂಕೋಸ್ ಮತ್ತು ಫ್ರಕ್ಟೋಸ್ ನಂತಹ ನೈಸರ್ಗಿಕ ಸಕ್ಕರೆಯಿಂದ ಸಮೃದ್ಧವಾಗಿರುವ ಖರ್ಜೂರ ಬೇಗನೆ ಶಕ್ತಿ ನೀಡುತ್ತದೆ.
ಹೃದಯಕ್ಕೆ ಒಳ್ಳೆಯದು: ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವುದರಿಂದ ಹೃದ್ರೋಗಗಳಿಂದ ರಕ್ಷಿಸುತ್ತದೆ.
ಚರ್ಮ ಮತ್ತು ಕೂದಲಿನ ಆರೋಗ್ಯ: ಇದರಲ್ಲಿರುವ ಜೀವಸತ್ವಗಳು ಮತ್ತು ಖನಿಜಗಳು ಚರ್ಮ ಮತ್ತು ಕೂದಲಿಗೆ ಪ್ರಯೋಜನಕಾರಿ.