ಮಲಬದ್ಧತೆಯನ್ನು ಗುಣಪಡಿಸುವುದರಿಂದ ಹಿಡಿದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸೋವರೆಗೂ ಮಜ್ಜಿಗೆ ನಮ್ಮ ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಅದರಲ್ಲೂ ಬೇಸಿಗೆಯ ಸಮಯದಲ್ಲಿ ಮಜ್ಜಿಗೆ ಕುಡಿಯೋದರಿಂದ (benefits of buttermilk)ಹಲವಾರು ಪ್ರಯೋಜನಗಳೂ ಇವೆ. ಮಜ್ಜಿಗೆಯಲ್ಲಿ ಕ್ಯಾಲ್ಸಿಯಂ, ಜೀವಸತ್ವಗಳು, ಪೊಟ್ಯಾಸಿಯಮ್, ಪ್ರೋಬಯಾಟಿಕ್ಗಳು, ಕ್ಯಾಲ್ಸಿಯಂ, ರಂಜಕ, ಉತ್ಕರ್ಷಣ ನಿರೋಧಕಗಳು ಮತ್ತು ಇತರ ಅಗತ್ಯ ಪೋಷಕಾಂಶಗಳಿವೆ. ಊಟದ ನಂತರ ಒಂದು ಲೋಟ ಮಜ್ಜಿಗೆ ಕುಡಿಯುವುದರಿಂದ ನಿಮ್ಮ ಆರೋಗ್ಯಕ್ಕೆ ಅದ್ಭುತಗಳನ್ನು ಮಾಡಬಹುದು. ಬೇಸಿಗೆ ಸಮೀಪಿಸುತ್ತಿದ್ದಂತೆ, ಗರಿಷ್ಠ ಪ್ರಯೋಜನಗಳನ್ನು ಪಡೆಯಲು ಇದನ್ನು ನಿಮ್ಮ ಆಹಾರದ ಒಂದು ಭಾಗವಾಗಿ ಮಾಡಿ.