ಬಾಯಿ ಆರೋಗ್ಯ
ಆರೋಗ್ಯ ತಜ್ಞರ ಪ್ರಕಾರ, ಪ್ರತಿದಿನ ರಾತ್ರಿ ಊಟದ ನಂತರ ಲವಂಗವನ್ನು ಅಗಿದರೆ ಹಲ್ಲುಗಳ ಮಧ್ಯೆ ಸಿಕ್ಕಿಹಾಕಿಕೊಂಡಿರುವ ಆಹಾರದಿಂದ ಉಂಟಾಗುವ ಬ್ಯಾಕ್ಟೀರಿಯಾ ಬೆಳವಣಿಗೆ ಕಡಿಮೆಯಾಗುತ್ತದೆ. ಲವಂಗದಲ್ಲಿರುವ ಆಂಟಿಮೈಕ್ರೊಬಿಯಲ್ ಗುಣಗಳು ಬಾಯಿಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುತ್ತವೆ.
ರಕ್ತದಲ್ಲಿನ ಸಕ್ಕರೆ ನಿಯಂತ್ರಣ
ಮಧುಮೇಹಿಗಳಿಗೆ ಊಟದ ನಂತರ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುವುದು ಸಾಮಾನ್ಯ. ಆದರೆ ಅತಿಯಾದರೆ ಸಮಸ್ಯೆ. ಊಟದ ನಂತರ ಎರಡು ಲವಂಗ ಅಗಿದರೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುವುದು ತಡೆಯುತ್ತದೆ.