ಈ ರೀತಿ ಲೈಫ್‍ಸ್ಟೈಲ್ ಫಾಲೋ ಮಾಡಿ, ಗರ್ಭಕಂಠದ ಕ್ಯಾನ್ಸರ್ ಅಪಾಯದಿಂದ ದೂರವಿರಿ

Published : Jan 13, 2026, 06:55 PM IST

Cervical Cancer Prevention Tips: ಇದು ಸಾಮಾನ್ಯವಾಗಿ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಎಂಬ ಲೈಂಗಿಕವಾಗಿ ಹರಡುವ ಸೋಂಕಿನಿಂದ ಉಂಟಾಗುತ್ತದೆ. ಜೀವನಶೈಲಿಯ ಕೆಲವು ಬದಲಾವಣೆಗಳು ಈ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ. 

PREV
18
ಜೀವನಶೈಲಿಯ ಕೆಲವು ಬದಲಾವಣೆ

ಗರ್ಭಕಂಠದ ಕ್ಯಾನ್ಸರ್ ಗರ್ಭಾಶಯದ ಕೆಳಭಾಗವನ್ನು ಯೋನಿಗೆ ಸಂಪರ್ಕಿಸುವ ಗರ್ಭಕಂಠದ ಕೋಶಗಳಲ್ಲಿ ಉಂಟಾಗುತ್ತದೆ. ಇದು ಸಾಮಾನ್ಯವಾಗಿ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಎಂಬ ಲೈಂಗಿಕವಾಗಿ ಹರಡುವ ಸೋಂಕಿನಿಂದ ಉಂಟಾಗುತ್ತದೆ. ಜೀವನಶೈಲಿಯ ಕೆಲವು ಬದಲಾವಣೆಗಳು ಈ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತವೆ.

28
ಕಾಂಡೋಮ್ ಬಳಕೆ

HPV ಲಸಿಕೆಗಳು ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವಾಗುವ ಕೆಲವು ವೈರಸ್‌ಗಳಿಂದ ರಕ್ಷಣೆ ನೀಡಬಲ್ಲವು. ಲೈಂಗಿಕ ಸಂಪರ್ಕಕ್ಕೂ ಮುನ್ನ ಲಸಿಕೆ ಪಡೆಯಲು ವೈದ್ಯರು ಸಲಹೆ ನೀಡುತ್ತಾರೆ. ಕಾಂಡೋಮ್ ಬಳಕೆಯು HPV ಹರಡುವ ಅಪಾಯವನ್ನು ಕಡಿಮೆ ಮಾಡುತ್ತದೆ. ಆದರೆ, ಇದು ಸಂಪೂರ್ಣ ರಕ್ಷಣೆ ನೀಡುವುದಿಲ್ಲ.

38
ಪ್ಯಾಪ್ ಸ್ಮಿಯರ್ ಪರೀಕ್ಷೆ

ನಿಯಮಿತ ಪ್ಯಾಪ್ ಸ್ಮಿಯರ್ ಪರೀಕ್ಷೆಗಳು ಗರ್ಭಕಂಠದ ಕ್ಯಾನ್ಸರ್‌ಗೆ ಕಾರಣವಾಗಬಹುದಾದ ಬದಲಾವಣೆಗಳನ್ನು ಪತ್ತೆಹಚ್ಚುತ್ತವೆ. ಇದರೊಂದಿಗೆ HPV ಪರೀಕ್ಷೆಯನ್ನೂ ಮಾಡಿಸಬಹುದು. 30 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಈ ಪರೀಕ್ಷೆಯನ್ನು ಸಾಮಾನ್ಯವಾಗಿ ಶಿಫಾರಸು ಮಾಡಲಾಗುತ್ತದೆ.

48
ಲೈಂಗಿಕ ಸಂಗಾತಿಗಳ ಸಂಖ್ಯೆ ಸೀಮಿತಗೊಳಿಸಿ

ಲೈಂಗಿಕ ಸಂಗಾತಿಗಳ ಸಂಖ್ಯೆಯನ್ನು ಸೀಮಿತಗೊಳಿಸುವುದು ಮತ್ತೊಂದು ಪ್ರಮುಖ ವಿಷಯ. ಇದು HPV ಮತ್ತು ಇತರ ಲೈಂಗಿಕವಾಗಿ ಹರಡುವ ಸೋಂಕುಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

58
ಧೂಮಪಾನವನ್ನ ತ್ಯಜಿಸಿ

ಧೂಮಪಾನವು ಗರ್ಭಕಂಠದ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಕಂಡುಬಂದಿದೆ. ಧೂಮಪಾನವನ್ನು ತ್ಯಜಿಸುವುದು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವುದಲ್ಲದೆ, ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ.

68
ಹಣ್ಣುಗಳು ಮತ್ತು ತರಕಾರಿಗಳು

ಹಣ್ಣುಗಳು ಮತ್ತು ತರಕಾರಿಗಳು ಸಮೃದ್ಧವಾಗಿರುವ ಪೌಷ್ಟಿಕ ಆಹಾರ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಗರ್ಭಕಂಠದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

78
ಜನನಾಂಗದ ಭಾಗವನ್ನು ಸ್ವಚ್ಛವಾಗಿಡಿ

ಸರಿಯಾದ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಸೋಂಕುಗಳ ಬೆಳವಣಿಗೆ ಮತ್ತು ಹರಡುವಿಕೆಯನ್ನು ತಡೆಯುತ್ತದೆ. ಜನನಾಂಗದ ಭಾಗವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

88
ಜಾಗೃತಿ ಮೂಡಿಸಿ

ಗರ್ಭಕಂಠದ ಕ್ಯಾನ್ಸರ್, ಅದರ ಕಾರಣಗಳು ಮತ್ತು ತಡೆಗಟ್ಟುವ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ. ಲಸಿಕೆ ಮತ್ತು ಸ್ಕ್ರೀನಿಂಗ್‌ಗೆ ಇತರರನ್ನು ಪ್ರೋತ್ಸಾಹಿಸಿ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಿ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories