ಸೀತಾಫಲದಲ್ಲಿ ವಿಟಮಿನ್ ಸಿ ಹೇರಳವಾಗಿದೆ. ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಹಲವು ರೋಗಗಳಿಂದ ನಮ್ಮನ್ನು ಕಾಪಾಡುತ್ತದೆ. ವಿಶೇಷವಾಗಿ ಶೀತ, ಕೆಮ್ಮು, ನೆಗಡಿ ಇತ್ಯಾದಿ ಸೋಂಕುಗಳನ್ನು ತಡೆಯುತ್ತದೆ.
ಜೀರ್ಣಕ್ರಿಯೆಗೆ
ಸೀತಾಫಲದಲ್ಲಿರುವ ನಾರಿನಂಶ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಮಲಬದ್ಧತೆ, ಗ್ಯಾಸ್ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ನಾರಿನಂಶ ಹೆಚ್ಚಿರುವುದರಿಂದ ಕರುಳಿನ ಆರೋಗ್ಯ ಸುಧಾರಿಸುತ್ತದೆ.
ರಕ್ತಹೀನತೆ ನಿವಾರಣೆ
ರಕ್ತಹೀನತೆಯಿಂದ ಬಳಲುವವರಿಗೆ ಸೀತಾಫಲ ತುಂಬಾ ಒಳ್ಳೆಯದು. ಇದರಲ್ಲಿರುವ ಕಬ್ಬಿಣದ ಅಂಶ ರಕ್ತದಲ್ಲಿ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಿ, ಆಯಾಸ, ದೌರ್ಬಲ್ಯ ಕಡಿಮೆ ಮಾಡುತ್ತದೆ.