ಪ್ರತಿದಿನ ಮೊಟ್ಟೆ ಸೇವಿಸುವುದರಿಂದ ಪ್ರೋಟೀನ್ ಕೊರತೆ ನೀಗುತ್ತದೆ ಮತ್ತು ತೂಕ ಇಳಿಕೆಗೆ ಸಹಾಯವಾಗುತ್ತದೆ. ಇದು ಮೆದುಳು, ಕಣ್ಣು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ, ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ.
ಉತ್ತಮ ಆರೋಗ್ಯಕ್ಕಾಗಿ ಪ್ರತಿದಿನ ಒಂದು ಮೊಟ್ಟೆ ಸೇವಿಸುವಂತೆ ಆಹಾರ ತಜ್ಞರು ಸಲಹೆ ನೀಡುತ್ತಾರೆ. ಮೊಟ್ಟೆ ಬಳಸಿ ರುಚಿ ರುಚಿಯಾದ ಖಾದ್ಯಗಳನ್ನು ತಯಾರಿಸಬಹುದು. ಮೊಟ್ಟೆಯೊಂದಿದ್ರೆ ಕಡಿಮೆ ಸಮಯದಲ್ಲಿ ಒಂದೊಳ್ಳೆ ಅಡುಗೆ ಮಾಡಬಹುದು. ಪ್ರತಿದಿನ ಎರಡು ಮೊಟ್ಟೆ ತಿನ್ನೋದರಿಂದ ಸೂಪರ್ ಪವರ್‌ಗಳು ನಿಮ್ಮದಾಗುತ್ತವೆ.
25
ಪ್ರೋಟಿನ್
ಮೊಟ್ಟೆಗಳಲ್ಲಿ ಪ್ರೋಟೀನ್ ಹೇರಳವಾಗಿದೆ. ಪ್ರೋಟೀನ್ ಕೊರತೆಯಿಂದ ಬಳಲುತ್ತಿರೋರು ಮೊಟ್ಟೆ ಸೇವಿಸಬಹುದು. ನಿಯಮಿತವಾಗಿ ಮೊಟ್ಟೆ ತಿನ್ನೋದರಿಂದ ಮೆದಳು ಮತ್ತು ಕಣ್ಣುಗಳ ಆರೋಗ್ಯ ಸುಧಾರಣೆಯಾಗುತ್ತದೆ.
35
ತೂಕ ಇಳಿಕೆ
ತೂಕ ಇಳಿಸಿಕೊಳ್ಳಲು ಬಯಸುವವರು ಪ್ರತಿದಿನ ಆಹಾರದಲ್ಲಿ ಪ್ರೋಟೀನ್ ಸಮೃದ್ಧವಾಗಿರುವ ಮೊಟ್ಟೆ ಸೇರಿಸಿಕೊಳ್ಳಬೇಕು. ಈ ಆಹಾರ ಪದ್ಧತಿ ನಿಮಗೆ ದೀರ್ಘ ಸಮಯದವರಗೆ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದರಿಂದ ಹೆಚ್ಚುವರಿ ಆಹಾರ ಸೇವನೆ ನಿಯಂತ್ರಿಸಲು ಸಾಧ್ಯವಾಗುತ್ತದೆ.
ಪ್ರತಿದಿನ ಮೊಟ್ಟೆ ತಿನ್ನುವುದರಿಂದ ಮೆದುಳಿನ ಕಾರ್ಯವನ್ನು ಸುಧಾರಿಸಲು ಸಹಾಯವಾಗುತ್ತದೆ. ವಿಶೇಷವಾಗಿ ಗರ್ಭಿಣಿಯರು ಪ್ರತಿದಿನ ಕನಿಷ್ಠ ಒಂದು ಮೊಟ್ಟೆಯನ್ನು ತಿನ್ನುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡುತ್ತಾರೆ. ಮಕ್ಕಳ ಆಹಾರದಲ್ಲಿಯೂ ಮೊಟ್ಟೆ ಸೇರಿಸಿ ಕೊಡಬೇಕು. ಇದು ಬೆಳೆಯುವ ಮಕ್ಕಳಿಗೆ ಸಹಾಯವಾಗುತ್ತದೆ.
ಪ್ರತಿದಿನ ಮೊಟ್ಟೆ ತಿನ್ನುವುದು ಹೃದಯದ ಕಾರ್ಯವನ್ನು ಸುಧಾರಿಸಲು ಒಳ್ಳೆಯದು. ಇದು ದೇಹದಲ್ಲಿ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹೃದಯ ಆರೋಗ್ಯಕ್ಕೆ ಮೊಟ್ಟೆ ಉತ್ತಮ ಆಹಾರವಾಗಿದೆ.
Disclaimer: ಇದು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಇದನ್ನು ಏಷ್ಯಾನೆಟ್ ಸುವರ್ಣ ನ್ಯೂಸ್ ದೃಢೀಕರಿಸುವದಿಲ್ಲ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.