Constipation Relief: ಮಲಬದ್ಧತೆ ಕಾಡ್ತಿದ್ಯಾ? ಈ ಹೆಲ್ತಿ ಡ್ರಿಂಕ್ಸ್ ಕುಡಿದ್ರೆ ಸಾಕು, ಸಮಸ್ಯೆ ಮಾಯ!

Published : Feb 14, 2026, 07:00 PM IST

Healthy drinks for constipation: ತುಂಬಾ ಜನರಿಗೆ ಮಲಬದ್ಧತೆ ಮತ್ತು ಜೀರ್ಣಕ್ರಿಯೆ ಸಮಸ್ಯೆ ಕಾಡುತ್ತಿರುತ್ತದೆ.  ಆದರೆ ಸರಿಯಾದ ಆಹಾರ ಪದ್ಧತಿ ಮತ್ತು ಆಗಾಗ ನೀರು ಕುಡಿಯುವುದರಿಂದ ಈ ಸಮಸ್ಯೆಯಿಂದ ಬಹುತೇಕ ದೂರವಿರಬಹುದು. ಮಲಬದ್ಧತೆ ನಿವಾರಿಸಲು ಈ ಕೆಲವು ಪಾನೀಯಗಳು ನಿಮ್ಮ ಡಯಟ್‌ನಲ್ಲಿರಲಿ.  

PREV
15
ಹರ್ಬಲ್ ಟೀ

ಹರ್ಬಲ್ ಟೀ ಕುಡಿಯುವುದು ಮಲಬದ್ಧತೆಯನ್ನು ತಡೆಯಲು ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ. ನೀವು ಶುಂಠಿ ಮತ್ತು ಪುದೀನಾ ಟೀ ಕುಡಿಯಬಹುದು. 

25
ಮಜ್ಜಿಗೆ
ಸಾಮಾನ್ಯವಾಗಿ ಬೇಸಿಗೆಯಲ್ಲಿ ಜನರು ಮಜ್ಜಿಗೆಯನ್ನು ಹೆಚ್ಚು ಕುಡಿಯುತ್ತಾರೆ. ಇದು ಜೀರ್ಣಕ್ರಿಯೆ ಸಮಸ್ಯೆಗಳನ್ನು ನಿವಾರಿಸಿ, ಮಲಬದ್ಧತೆ ತಡೆಯಲು ಸಹಾಯ ಮಾಡುತ್ತದೆ.
35
ಪ್ರೂನ್ಸ್ ಜ್ಯೂಸ್
ಮಲಬದ್ಧತೆ ನಿವಾರಿಸಲು ಪ್ರೂನ್ಸ್ ಜ್ಯೂಸ್ ಕುಡಿಯುವುದು ತುಂಬಾ ಒಳ್ಳೆಯದು. ಇದರಲ್ಲಿ ಫೈಬರ್ ಅಂಶ ಅಧಿಕವಾಗಿದ್ದು, ಮಲಬದ್ಧತೆ ಸಮಸ್ಯೆಯನ್ನು ಸುಲಭವಾಗಿ ತಡೆಯುತ್ತದೆ.
45
ಲೋಳೆಸರ ಜ್ಯೂಸ್
ಮಲಬದ್ಧತೆ ಸಮಸ್ಯೆಯನ್ನು ದೂರ ಮಾಡಲು ಲೋಳೆಸರ ಜ್ಯೂಸ್ ಕುಡಿಯುವುದು ಉತ್ತಮ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್‌ಗಳು ಹೇರಳವಾಗಿವೆ, ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
55
ಅಗಸೆ ಬೀಜದ ನೀರು
ಅಗಸೆ ಬೀಜದಲ್ಲಿ ನಾರಿನಾಂಶ ಅಧಿಕವಾಗಿದೆ. ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಒಂದು ಟೇಬಲ್‌ಸ್ಪೂನ್ ಅಗಸೆ ಬೀಜವನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಆ ನೀರನ್ನು ಕುಡಿದರೆ ಸಾಕು.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories