ನೋವು ನಿವಾರಕಗಳ ಅನಿಯಮಿತ ಸೇವನೆ, ಕಡಿಮೆ ನೀರು ಕುಡಿಯುವುದು, ಮತ್ತು ಮೂತ್ರವನ್ನು ಹಿಡಿದಿಟ್ಟುಕೊಳ್ಳುವಂತಹ ದೈನಂದಿನ ಅಭ್ಯಾಸಗಳು ಕಿಡ್ನಿಗಳ ಆರೋಗ್ಯಕ್ಕೆ ಹಾನಿಕಾರಕ. ಈ ತಪ್ಪುಗಳು ದೀರ್ಘಕಾಲದಲ್ಲಿ ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು, ಆದ್ದರಿಂದ ಎಚ್ಚರಿಕೆ ವಹಿಸುವುದು ಅತ್ಯಗತ್ಯ.
ನಿರಂತರವಾಗಿ ಔಷಧಿಗಳನ್ನು ತೆಗೆದುಕೊಳ್ಳುವುದು ಕಿಡ್ನಿಗಳ ಆರೋಗ್ಯವನ್ನು ಹದಗೆಡಿಸುತ್ತದೆ. ವೈದ್ಯರ ಸಲಹೆ ಇಲ್ಲದೆ ನೋವು ನಿವಾರಕಗಳು, ಜ್ವರದ ಮಾತ್ರೆಗಳನ್ನು ಸೇವಿಸುವುದು ಕಿಡ್ನಿಗಳಿಗೆ ಹಾನಿ ಉಂಟುಮಾಡಬಹುದು.
25
ನೀರು ಕುಡಿಯೋದಿರೋದು
ಕಿಡ್ನಿಗಳು ಸರಿಯಾಗಿ ಕಾರ್ಯನಿರ್ವಹಿಸಲು ನೀರು ಅತ್ಯಗತ್ಯ. ಸಾಕಷ್ಟು ನೀರು ಕುಡಿಯದಿರುವುದು ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು.
35
ಪ್ರೋಟೀನ್ ಪ್ರಮಾಣ ಹೆಚ್ಚಳ ಕೂಡ ಅಪಾಯ
ದೇಹದ ಆರೋಗ್ಯಕ್ಕೆ ಪ್ರೋಟೀನ್ ಅತ್ಯಗತ್ಯ. ಆದರೆ ದೇಹದಲ್ಲಿ ಪ್ರೋಟೀನ್ ಪ್ರಮಾಣ ಹೆಚ್ಚಾಗುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇದು ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು.
ಮೂತ್ರವನ್ನು ಹಿಡಿದಿಟ್ಟುಕೊಳ್ಳುವ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದಲ್ಲ. ಇದು ಕಿಡ್ನಿಗಳ ಕಾರ್ಯನಿರ್ವಹಣೆಗೆ ಅಡ್ಡಿಯಾಗುತ್ತದೆ. ನಿರಂತರವಾಗಿ ಮೂತ್ರ ತಡೆಹಿಡಿಯುವುದು ಕಿಡ್ನಿ ವೈಫಲ್ಯಕ್ಕೆ ಕಾರಣವಾಗಬಹುದು.\
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.