Empty stomach foods to avoid: ಖಾಲಿ ಹೊಟ್ಟೆಯಲ್ಲಿ ತಿನ್ನಬಾರದ ಕೆಲವು ಆಹಾರಗಳಿವೆ. ಒಂದು ವೇಳೆ ತಿಂದರೆ ಇವು ನಮ್ಮ ದೇಹವನ್ನು ಅಸ್ವಸ್ಥಗೊಳಿಸಬಹುದು. ಹಾಗಾದರೆ ಆ ಆಹಾರಗಳು ಯಾವುವು ಎಂದು ವಿವರವಾಗಿ ನೋಡೋಣ ಬನ್ನಿ..
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೊಸರು ತಿನ್ನುವುದರಿಂದ ಅಸಿಡಿಟಿ ಉಂಟಾಗುತ್ತದೆ. ಇದರಿಂದ ನಿಮ್ಮ ಹೊಟ್ಟೆಯಲ್ಲಿರುವ ಒಳ್ಳೆಯ ಬ್ಯಾಕ್ಟೀರಿಯಾ ನಾಶವಾಗುತ್ತದೆ. ಆದ್ದರಿಂದ ನೀವು ಏನನ್ನಾದರೂ ತಿಂದ ನಂತರವೇ ಮೊಸರು ತಿನ್ನಬೇಕು.
58
ಕಾಫಿ
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕಾಫಿ ಕುಡಿಯುವುದನ್ನು ತಪ್ಪಿಸಬೇಕು. ಹಾಗೆ ಮಾಡುವುದರಿಂದ ಜೀರ್ಣಕ್ರಿಯೆ ಸಮಸ್ಯೆಗಳು ಉಂಟಾಗಬಹುದು. ಏಕೆಂದರೆ ಕಾಫಿಯಲ್ಲಿ ಬಹಳಷ್ಟು ಕೆಫೀನ್ ಇರುತ್ತದೆ.
68
ಸಿಟ್ರಸ್ ಹಣ್ಣು
ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸಿಟ್ರಸ್ ಹಣ್ಣುಗಳನ್ನು ತಿನ್ನುವುದನ್ನು ತಪ್ಪಿಸಿ. ಈ ಹಣ್ಣುಗಳು ಸಿಟ್ರಿಕ್ ಆಸಿಡ್‌ನಿಂದ ಸಮೃದ್ಧವಾಗಿವೆ. ಈ ಸಮಸ್ಯೆ ತಪ್ಪಿಸಲು ಸಿಟ್ರಸ್ ಹಣ್ಣು ತಿನ್ನುವುದನ್ನು ತಪ್ಪಿಸಬೇಕು
78
ತಂಪು ಪಾನೀಯ
ಚಳಿಗಾಲದಲ್ಲಿ ತಂಪು ಪಾನೀಯಗಳನ್ನ ಅತ್ಯಂತ ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ. ಇವು ಶೀತ ಮತ್ತು ಜ್ವರಕ್ಕೆ ಕಾರಣವಾಗಬಹುದು. ಆದ್ದರಿಂದ ನೀವು ಖಾಲಿ ಹೊಟ್ಟೆಯಲ್ಲಿ ಅವುಗಳನ್ನು ಕುಡಿಯುವುದು ತಪ್ಪಿಸಬೇಕು. ಇದು ಹೊಟ್ಟೆಯಲ್ಲಿ ಗ್ಯಾಸ್‌ಗೆ ಕಾರಣವಾಗಬಹುದು.
88
ಬಾಳೆಹಣ್ಣು
ಈ ಎಲ್ಲಾ ಗಂಭೀರ ಸಮಸ್ಯೆಯಿಂದ ನಿಮ್ಮ ದೇಹವನ್ನು ರಕ್ಷಿಸಿಕೊಳ್ಳಲು ನೀವು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಆಹಾರ ಸೇವಿಸುವುದನ್ನು ತಪ್ಪಿಸಬೇಕು. ಬದಲಾಗಿ ನೀವು ಪ್ರತಿದಿನ ಬಾಳೆಹಣ್ಣು ಸೇವಿಸಬೇಕು.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.