Lower brain tumor risk: ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸರಿಯಾದ ಜೀವನಶೈಲಿ ಬಹಳ ಮುಖ್ಯ. ಬ್ರೈನ್ ಟ್ಯೂಮರ್‌ನಂತಹ ಕಾಯಿಲೆಗಳ ಅಪಾಯವನ್ನು ತಡೆಯಲು ನೀವು ಗಮನಿಸಬೇಕಾದ ಕೆಲವು ಪ್ರಮುಖ ಅಂಶಗಳ ಬಗ್ಗೆ ಇಲ್ಲಿ ತಿಳಿಯೋಣ.
ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳನ್ನು ನಿಮ್ಮ ಆಹಾರದಲ್ಲಿ ಹೆಚ್ಚಾಗಿ ಸೇರಿಸಿ. ಇದರೊಂದಿಗೆ, ಬೆರ್ರಿ ಹಣ್ಣುಗಳು, ಸೊಪ್ಪು ಹಾಗೂ ಕೊಬ್ಬಿನಾಂಶವಿರುವ ಮೀನುಗಳನ್ನು ತಿನ್ನಬಹುದು. ಇದು ಬ್ರೈನ್ ಟ್ಯೂಮರ್ ಅಪಾಯವನ್ನು ಕಡಿಮೆ ಮಾಡುತ್ತದೆ.
25
ಪ್ರತಿದಿನ ವ್ಯಾಯಾಮ ಮಾಡಿ
ಪ್ರತಿದಿನ ವ್ಯಾಯಾಮ ಮಾಡುವುದರಿಂದ ದೇಹ ಆರೋಗ್ಯವಾಗಿರುತ್ತದೆ. ವ್ಯಾಯಾಮವನ್ನು ನಿಮ್ಮ ದೈನಂದಿನ ಅಭ್ಯಾಸವನ್ನಾಗಿ ಮಾಡಿಕೊಳ್ಳಿ. ಇದು ಬ್ರೈನ್ ಟ್ಯೂಮರ್ ಬರುವ ಸಾಧ್ಯತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
35
ಹೊಸ ವಿಷಯಗಳನ್ನು ಕಲಿಯಿರಿ
ಯಾವಾಗಲೂ ಹೊಸ ವಿಷಯಗಳನ್ನು ಕಲಿಯುವುದು ಅಥವಾ ಹೊಸ ಕೆಲಸಗಳನ್ನು ಮಾಡುವುದು ಮೆದುಳನ್ನು ಸಕ್ರಿಯವಾಗಿಡುತ್ತದೆ. ಇದರಿಂದ ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಮತ್ತು ಬ್ರೈನ್ ಟ್ಯೂಮರ್‌ನಂತಹ ಕಾಯಿಲೆಗಳನ್ನು ತಡೆಯಬಹುದು.
ಮದ್ಯಪಾನ ಮತ್ತು ಧೂಮಪಾನದಂತಹ ಕೆಟ್ಟ ಅಭ್ಯಾಸಗಳನ್ನು ಸಂಪೂರ್ಣವಾಗಿ ತ್ಯಜಿಸುವುದು ಬಹಳ ಮುಖ್ಯ. ಇದು ಬ್ರೈನ್ ಟ್ಯೂಮರ್‌ನಂತಹ ಕಾಯಿಲೆಗಳು ಬರದಂತೆ ತಡೆಯುತ್ತದೆ.
55
ಒತ್ತಡವನ್ನು ನಿಯಂತ್ರಿಸಲು ಟ್ರೈ ಮಾಡಿ
ಅತಿಯಾದ ಒತ್ತಡವು ಬ್ರೈನ್ ಟ್ಯೂಮರ್‌ನಂತಹ ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಆದ್ದರಿಂದ, ನಿಮ್ಮ ದೈನಂದಿನ ಜೀವನದಲ್ಲಿ ಒತ್ತಡವನ್ನು ನಿಯಂತ್ರಿಸಲು ಪ್ರಯತ್ನಿಸಿ. ಯೋಗ, ಧ್ಯಾನ ಇದಕ್ಕೆ ಸಹಕಾರಿ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.