ಉಪ್ಪಿನಲ್ಲಿ ಸೋಡಿಯಂ ಅಂಶ ಅತ್ಯಧಿಕವಾಗಿರುತ್ತದೆ. ಒಂದು ವೇಳ ದೇಹದಲ್ಲಿ ಸೋಡಿಯಂ ಅಂಶ ಕಡಿಮೆಯಾದ್ರೆ ಅನೇಕ ರೋಗಗಳು ಕಾಣಿಸಿಕೊಳ್ಳುತ್ತವೆ. ದೇಹದಲ್ಲಿ ನೀರಿನ ಮಟ್ಟವನ್ನು ಸರಿಯಾಗಿ ನಿರ್ವಹಿಸುವ ಪ್ರಕ್ರಿಯೆಯಲ್ಲಿ ಸೋಡಿಯಂ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಪೋಷಕಾಂಶಗಳು ಮತ್ತು ಆಮ್ಲಜನಕವನ್ನು ದೇಹದ ಇತರೆ ಭಾಗಗಳಿಗೆ ಸಾಗಿಸಲು ಇದು ಕೆಲಸ ಮಾಡುತ್ತದೆ.