ಟ್ರಾವೆಲ್ ವ್ಲೋಗರ್ ಜ್ಯೋತಿ ಮಲ್ಹೋತ್ರಾ ಅವರನ್ನು ಬೇಹುಗಾರಿಕೆ ನಡೆಸುತ್ತಿದ್ದಾರೆಂದು ಶಂಕಿಸಿ ಬಂಧಿಸಿದ ನಂತರ, ಹಿಸಾರ್ ಪೊಲೀಸರು ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳನ್ನು ಶತ್ರು ದೇಶಗಳು ಗುರಿಯಾಗಿಸಿಕೊಂಡಿವೆ ಎಂದು ಎಚ್ಚರಿಕೆ ನೀಡಿದ್ದರು. ಸುಲಭ ಹಣಕ್ಕಾಗಿ, ಅಂತಹ ಪ್ರಭಾವಿಗಳು ತಪ್ಪು ದಾರಿಯಲ್ಲಿ ಹೋಗುತ್ತಿದ್ದಾರೆ ಎಂದು ಹಿಸಾರ್ ಎಸ್ಪಿ ಶಶಾಂಕ್ ಕುಮಾರ್ ಸಾವನ್ ವರದಿಗಾರರಿಗೆ ತಿಳಿಸಿದ್ದಾರೆ.
ಪಹಲ್ಗಾಮ್ ಹತ್ಯಾಕಾಂಡದ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿರುವ ನಡುವೆ ಈ ಬಂಧನಗಳು ಮಹತ್ವದ್ದಾಗಿವೆ.