ವಿಶ್ವದ ಅತೀ ಎತ್ತರದ ಅಟಲ್‌ ಟನಲ್‌ನ ಎಂಟು ವಿಶೇಷತೆಗಳಿವು!

First Published Oct 3, 2020, 4:26 PM IST

ಸಮುದ್ರಮಟ್ಟದಿಂದ 10 ಸಾವಿರ ಅಡಿ ಎತ್ತರದಲ್ಲಿ ನಿರ್ಮಾಣವಾಗಿರುವ, ‘ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ’ ಎಂಬ ಹಿರಿಮೆಗೆ ಪಾತ್ರವಾಗಿರುವ 9.02 ಕಿ.ಮೀ ಉದ್ದದ ಮನಾಲಿ-ಲೇಹ್‌ ನಡುವಿನ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಮೂಲಕ ಈ ಪ್ರದೇಶದ ಜನರ ಮೇಲಿನ ಬಹುದೊಡ್ದಡ ಭಾರ ಇಳಿದಂತಾಗಿದೆ. ಅಷ್ಟಕ್ಕೂ ಈ ಅಟಲ್ ಸುರಂಗ ಮಾರ್ಗದ ವಿಶೇಷತೆಗಳೇನು? ಇಲ್ಲಿವೆ ನೋಡಿ ಎಂಟು ಸ್ಪೆಷಾಲಿಟೀಸ್

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಕನಸಿನ ಯೋಜನೆ ಇಂದು ಸಾಕಾರಗೊಂಡಿದೆ. ಈ ಮೂಲಕ ಮನಾಲಿ, ಲೇಹ್, ಲಡಾಖ್‌ನ ಜನರು ಸಂತಸಗೊಂಡಿದ್ದಾರೆ.
undefined
ಹಿಮಾಚಲಪ್ರದೇಶದಲ್ಲಿರುವ ಈ ಸುರಂಗಕ್ಕೆ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರಿಡಲಾಗಿದ್ದು, ಈ ಸುರಂಗದಿಂದ ಮನಾಲಿ ಹಾಗೂ ಲೇಹ್‌ ನಗರಗಳ ನಡುವಣ ಅಂತರ 46 ಕಿ.ಮೀ.ಯಷ್ಟುತಗ್ಗಲಿದೆ.
undefined
ವ್ಯೂಹಾತ್ಮಕವಾಗಿ ಮಹತ್ವವಾಗಿರುವ ಈ ಯೋಜನೆಗೆ 2002ರಲ್ಲಿ ಆಗಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನೇತೃತ್ವದ ಸರ್ಕಾರ ಚಾಲನೆ ನೀಡಿತ್ತು.
undefined
2000ನೇ ಇಸವಿಯ ಜೂನ್ 3ರಂದು ರೋಹ್ತಂಗ್ ಪಾಸ್ ಸುರಂಗ ಮಾರ್ಗ ನಿರ್ಮಿಸುವ ಬಗ್ಗೆ ಪ್ರಧಾನಿ ವಾಜಪೇಯಿ ತೀರ್ಮಾನಿಸಿದ್ದರು.
undefined
2002ರ ಮೇ 26 ರಂದು ಶಂಕು ಸ್ಥಾಪನೆಯನ್ನೂ ನೆರವೇರಿಸಿದ್ದರು. ವಿಪರೀತ ಹಿಮದಿಂದಾಗಿ ವರ್ಷದಲ್ಲಿ ಆರು ತಿಂಗಳು ಮಾತ್ರ ಮನಾಲಿ ಹಾಗೂ ಲೇಹ್ ನಡುವೆ ಸಂಚಾರ ಸಾಧ್ಯವಾಗಿತ್ತು. ಈ ಕೊರತೆ ನೀಗಿಸಿ ವರ್ಷವಿಡೀ ಸಂಚಾರಕ್ಕೆ ಅವಕಾಶ ಕಲ್ಪಿಸಲು ಈ ಸುರಂಗ ಮಾರ್ಗ ನಿರ್ಮಿಸಲಾಗಿದೆ.
undefined
ಈ ಸುರಂಗ ಮಾರ್ಗ ನಿರ್ಮಿಸಲಾಗಿದೆ. ಮನಾಲಿಯಿಂದ 25 ಕಿ. ಮೀ ದೂರದಿಂದ ಆರಂಭವಾಗುವ ಈ ಸುರಂಗ ಲಾಹೋಲ್ ತೆಲ್ಲಿಂಗಗ್ ಗ್ರಾಮದಲ್ಲಿ ಕೊನೆಯಾಗುತ್ತದೆ.
undefined
ಕುದುರೆ ಲಾಳಾಕೃತಿಯ ದ್ವಿಪಥ ಮಾರ್ಗವನ್ನು ಸುರಂಗ ಹೊಂದಿದೆ
undefined
8 ಮೀ. ಅಗಲದ ರಸ್ತೆ. 5.525 ಮೀ. ಎತ್ತರದ ವಾಹನ ಚಲಿಸಬಹುದು
undefined
ನಿತ್ಯ 3000 ಕಾರು, 1500 ಲಾರಿಗಳ ಸಂಚಾರಕ್ಕೆ ಅವಕಾಶ
undefined
ಗರಿಷ್ಠ 80 ಕಿ.ಮೀ. ವೇಗದಲ್ಲಿ ಹೋಗಬಹುದು
undefined
ಸರ್ವಋುತು ಸುರಂಗ. ಹಿಮಪಾತ ವೇಳೆಯೂ ವಾಹನ ಸಂಚಾರ
undefined
150 ಮೀಟರ್‌ಗಳಿಗೊಂದು ಟೆಲಿಫೋನ್‌ ವ್ಯವಸ್ಥೆ
undefined
ಪ್ರತೀ 1 ಕಿ.ಮೀ.ಗೊಂದು ಗಾಳಿಯ ಶುದ್ಧತೆಯ ಪರೀಕ್ಷಾ ವ್ಯವಸ್ಥೆ
undefined
ಪ್ರತೀ 250 ಮೀಟರ್‌ಗೊಂದು ಬ್ರಾಡ್‌ಕಾಸ್ಟ್‌ ವ್ಯವಸ್ಥೆ, ಸಿಸಿ ಕ್ಯಾಮೆರಾ, ಸ್ವಯಂಚಾಲಿತ ಅನಾಹುತ ಘಟನೆ ಪತ್ತೆ ವ್ಯವಸ್ಥೆ
undefined
click me!