ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಅಪಘಾತದ ಸಾವು ವ್ಯವಸ್ಥಿತ ಕೊಲೆ ಎಂದು ಅವರ ಅಳಿಯ ರೋಹಿತ್ ರಾಜೇಂದ್ರ ಪವಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.
ಮಹಾರಾಷ್ಟ್ರ ರಾಜಕಾರಣದ ದಿಗ್ಗಜ, ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವು ಕೇವಲ ಅಪಘಾತವಲ್ಲ, ಅದೊಂದು ವ್ಯವಸ್ಥಿತ ಸಂಚು ಮತ್ತು ಕೊಲೆ ಎಂದು ಅವರ ಅಳಿಯ ರೋಹಿತ್ ರಾಜೇಂದ್ರ ಪವಾರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹಲವು ಅನುಮಾನಾಸ್ಪದ ಸಂಗತಿಗಳನ್ನು ಹೊರಹಾಕಲಾಗಿದೆ.
28
ಹಾರಾಟಕ್ಕೆ ಯೋಗ್ಯವಲ್ಲದ ವಿಮಾನದ ಬಳಕೆ
ಪತನಗೊಂಡ ವಿಮಾನವು ತನ್ನ ಸುರಕ್ಷಿತ ಹಾರಾಟದ ಮಿತಿ 5,000 ಗಂಟೆಗಳನ್ನು ಈಗಾಗಲೇ ಮುಗಿಸಿತ್ತು. ಆದರೆ, ದಾಖಲೆಗಳನ್ನು ತಿದ್ದಿ ಅದನ್ನು ವಾಣಿಜ್ಯ ಬಳಕೆಗೆ ಬಳಸಲಾಗಿತ್ತು. ಸುಮಾರು 8,000 ಗಂಟೆಗಳ ಕಾಲ ಹಾರಾಟ ನಡೆಸಿದ್ದರೂ ಆ ವಿಷಯವನ್ನು ಮುಚ್ಚಿಡಲಾಗಿತ್ತು. ಅಮೆರಿಕಾದಲ್ಲಿ ಸೇವೆಯಿಂದ ನಿವೃತ್ತಿಗೊಂಡಿದ್ದ (Discarded) ವಿಮಾನವನ್ನು ಭಾರತಕ್ಕೆ ತಂದು ಬಳಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. DGCA ತನಿಖೆಯಲ್ಲೂ ಈ ವಿಮಾನವು ಹಾರಾಟಕ್ಕೆ ಯೋಗ್ಯವಾಗಿರಲಿಲ್ಲ ಎಂಬುದು ತಿಳಿದುಬಂದಿದೆ.
38
ಕುಡುಕ ಪೈಲಟ್ ಕೈಗೆ ವಿಮಾನದ ಜವಾಬ್ದಾರಿ
ವಿಮಾನದ ಮುಖ್ಯ ಪೈಲಟ್ ಸುಮಿತ್ ಕಪೂರ್ ಈ ಹಿಂದೆ ಎರಡು ಬಾರಿ ಮದ್ಯಪಾನ ಮಾಡಿ ಸಿಕ್ಕಿಬಿದ್ದಿದ್ದ ಇತಿಹಾಸ ಹೊಂದಿದ್ದರು ಮತ್ತು ಈ ಕಾರಣಕ್ಕೆ ಅಮಾನತುಗೊಂಡಿದ್ದರು. ಇಂತಹ ವಿವಾದಾತ್ಮಕ ಹಿನ್ನೆಲೆ ಇದ್ದರೂ ಉಪಮುಖ್ಯಮಂತ್ರಿಗಳ ವಿಮಾನಕ್ಕೆ ಅವರನ್ನೇ ಪೈಲಟ್ ಆಗಿ ನೇಮಿಸಿದ್ದು ಯಾಕೆ ಎಂಬ ಪ್ರಶ್ನೆ ಎದ್ದಿದೆ.
ಮೊದಲು ನಿಗದಿಯಾಗಿದ್ದ ಪೈಲಟ್‌ಗಳನ್ನು ಕೊನೆಯ ಕ್ಷಣದಲ್ಲಿ ದಿಢೀರ್ ಆಗಿ ಬದಲಿಸಿ, ಸುಮಿತ್ ಕಪೂರ್ ಮತ್ತು ಅವರ ತಂಡವನ್ನು ನೇಮಿಸಲಾಗಿತ್ತು. ಇದು ವ್ಯವಸ್ಥಿತ ಸಂಚಿನ ಭಾಗ ಎಂಬ ಅನುಮಾನ ವ್ಯಕ್ತವಾಗಿದೆ.
58
ಪ್ರಯಾಣದ ಪ್ಲ್ಯಾನ್ ಬದಲಾಗಿದ್ದು ಹೇಗೆ?
ಅಜಿತ್ ಪವಾರ್ ಅವರು ರಸ್ತೆ ಮೂಲಕ ಪ್ರಯಾಣಿಸಬೇಕಿತ್ತು. ಆದರೆ ಕೊನೆ ಕ್ಷಣದಲ್ಲಿ ಅದು ವಿಮಾನ ಪ್ರಯಾಣವಾಗಿ ಬದಲಾಗಿದ್ದು ಹೇಗೆ? ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ರೋಹಿತ್ ಪವಾರ್ ಒತ್ತಾಯಿಸಿದ್ದಾರೆ.
68
ಕಾಕ್‌ಪಿಟ್‌ನಲ್ಲಿನ 'ಆಘಾತಕಾರಿ ಮೌನ'
ವಿಮಾನ ಪತನವಾಗುವ ಕೊನೆಯ ಕ್ಷಣದಲ್ಲಿ ಕೋ-ಪೈಲಟ್ "ಓ ಶಿಟ್" (Oh Shit) ಎಂದು ಕಿರುಚಿದ್ದಾರೆ. ಆದರೆ ಮುಖ್ಯ ಪೈಲಟ್ ಕಪೂರ್ ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿದ್ದರು. ಪೈಲಟ್ ಮದ್ಯದ ಅಮಲಿನಲ್ಲಿದ್ದರೇ ಅಥವಾ ಉದ್ದೇಶಪೂರ್ವಕವಾಗಿ ಸುಮ್ಮನಿದ್ದರೇ ಎಂಬುದು ದೊಡ್ಡ ಪ್ರಶ್ನೆಯಾಗಿದೆ.
78
ಹವಾಮಾನ ವರದಿ ನಿರ್ಲಕ್ಷ್ಯ
ಬಾರಾಮತಿ ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಕವಿದಿತ್ತು ಮತ್ತು ಕನಿಷ್ಠ 5 ಕಿ.ಮೀ ವಿಸಿಬಿಲಿಟಿ ಇರಲಿಲ್ಲ. ಇಂತಹ ಅಪಾಯಕಾರಿ 'ಟೇಬಲ್‌ಟಾಪ್ ರನ್‌ವೇ'ನಲ್ಲಿ ಲ್ಯಾಂಡಿಂಗ್‌ಗೆ ಅನುಮತಿ ನೀಡಿದವರು ಯಾರು? ಎಂಬುದು ಅನುಮಾನಕ್ಕೆ ಕಾರಣವಾಗಿದೆ.
88
ಬೆಂಗಳೂರಿನಲ್ಲಿ ಜೀರೋ ಎಫ್‌ಐಆರ್
ವಿಎಸ್ಆರ್ ವೆಂಚರ್ಸ್ (VSR Ventures) ನಿಯಮಗಳನ್ನು ಗಾಳಿಗೆ ತೂರಿ ಈ ಹಾರಾಟಕ್ಕೆ ಅವಕಾಶ ನೀಡಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬೆಂಗಳೂರಿನಲ್ಲಿ ಘಟನೆ ನಡೆಯದಿದ್ದರೂ ದೂರನ್ನು ಸ್ವೀಕರಿಸಿ 'ಝಿರೋ ಎಫ್ಐಆರ್' ದಾಖಲಿಸಿಕೊಂಡಿರುವ ಹೈಗ್ರೌಂಡ್ಸ್ ಪೊಲೀಸರು, ಈಗ ಈ ಪ್ರಕರಣವನ್ನು ಸಂಬಂಧಪಟ್ಟ ವ್ಯಾಪ್ತಿಯ ಪೊಲೀಸ್ ಠಾಣೆಗೆ ವರ್ಗಾಯಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ