ಸೆಕ್ಸ್ ರಾಕೆಟ್‌ನಲ್ಲಿ ಅರೆಸ್ಟ್ ಆದ ಯುವತಿಗೆ ಕೊರೋನಾ, ಪೊಲೀಸರಿಗೆ ನಡುಕ!
First Published | Aug 25, 2020, 5:06 PM ISTಕೊರೋನಾ ಮಹಾಮಾರಿಯಿಂದ ರಕ್ಷಿಸಿಕೊಳ್ಳಲು ಜನರ ಬಳಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಲಾಗುತ್ತಿದೆ. ಆರೋಗ್ಯ ಇಲಾಖೆಯಿಂದ ಹಿಡಿದು ಪೊಲೀಸರವರೆಗೆ ಎಲ್ಲರೂ ಜನರ ಬಳಿ ಅಂತರ ಕಾಪಾಡಿಕೊಳ್ಳುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಹೀಗಿರುವಾಗಲೇ ರಾಜಸ್ಥಾನದಲ್ಲಿ ಬೆಳಕಿಗೆ ಬಂದ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಯಾಕೆಂದರೆ ಇಲ್ಲಿ ಸೆಕ್ಸ್ ರಾಕೆಟ್‌ನಲ್ಲಿ ಅರೆಸ್ಟ್ ಆದ ಯುವತಿಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಮಾಹಿತಿ ಬಹಿರಂಗವಾದ ಬೆನ್ನಲ್ಲೇ ಪೊಲೀಸರಿಗೆ ಆತಂಕ ಶುರುವಾಗಿದೆ.