ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಅವರು, ಈ ಘಟನೆಯಿಂದ ಇಡೀ ದೇಶ ಆಘಾತಕ್ಕೊಳಗಾಗಿದೆ. ಸುಪ್ರೀಂಕೋರ್ಟ್ ಈ ಕುರಿತು ತನಿಖೆಗೆ ಆದೇಶಿಸಿದೆ. ನ್ಯಾಯಾಂಗವು ಪ್ರಜಾಪ್ರಭುತ್ವದ ಪ್ರಮುಖ ಆಧಾರ ಸ್ತಂಭಗಳಲ್ಲೊಂದು. ಇದು ಭ್ರಷ್ಟಾಚಾರದಿಂದ ಮುಕ್ತವಾಗಿರಬೇಕಿದೆ. ಹೀಗಾಗಿ ಭವಿಷ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಉತ್ತರದಾಯಿತ್ವ, ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಂಸತ್ತಿನಲ್ಲಿ ಚರ್ಚೆಯ ಅಗತ್ಯವಿದೆ ಎಂದು ಹೇಳಿದರು. ಈ ಬೇಡಿಕೆಗೆ ಹಲವು ಕಾಂಗ್ರೆಸ್ ನಾಯಕರು ದನಿಗೂಡಿಸಿದರು.