ಚುನಾವಣೆಗೂ ಮೊದಲೇ ಪ.ಬಂಗಾಳದಲ್ಲಿ ಬಿಜೆಪಿಗೆ ಶಾಕ್ ನೀಡಿದ ಮಮತಾ ಬ್ಯಾನರ್ಜಿ

Published : Dec 27, 2025, 10:39 AM IST

2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ನಟಿ ಇದೀಗ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾರ್ಯವೈಖರಿಯಿಂದ ಪ್ರೇರಿತರಾಗಿ, ಜನರ ಸೇವೆ ಮಾಡಲು ಬಿಜೆಪಿಯಲ್ಲಿ ಸೂಕ್ತ ಅವಕಾಶ ಸಿಗದ ಕಾರಣ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

PREV
15
ಬಿಜೆಪಿಗೆ ಶಾಕ್

ಚುನಾವಣೆಗಳು ನಡೆಯುವ ಸಂದರ್ಭದಲ್ಲಿ ರಾಜಕೀಯ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಬದಲಾಗುತ್ತಿರುತ್ತಾರೆ. ಹೊಸ ಮತ್ತು ಪ್ರಬಲ ನಾಯಕರನ್ನು ಕರೆದುಕೊಂಡು ಬರುವ ಮೂಲಕ ಪಕ್ಷ ಸಂಘಟನೆಗೆ ಎಲ್ಲರೂ ಮುಂದಾಗುತ್ತಾರೆ. ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ನಟಿ, ನಾಯಕಿ ಟಿಎಂಸಿ ಸೇರ್ಪಡೆಯಾಗಿದ್ದಾರೆ

25
ಶುಕ್ರವಾರ ಅಧಿಕೃತವಾಗಿ ಟಿಎಂಸಿ ಸೇರ್ಪಡೆ

2021ರಲ್ಲಿ ಬಿಜೆಪಿಯಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ನಟಿ ಪರ್ನೋ ಮಿತ್ರಾ ಶುಕ್ರವಾರದಂದು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಮತ್ತು ಪಕ್ಷದ ವಕ್ತಾರ ಜಯ ಪ್ರಕಾಶ್ ಮಜುಂದಾರ್ ಅವರ ಸಮ್ಮುಖದಲ್ಲಿ ಟಿಎಂಸಿ ಸೇರ್ಪಡೆಯಾಗಿದ್ದಾರೆ. ತಪ್ಪುಗಳನ್ನು ಸರಿ ಮಾಡಿಕೊಳ್ಳುವ ಉದ್ದೇಶದಿಂದ ಬಿಜೆಪಿ ತೊರೆದು ಟಿಎಂಸಿ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ.

35
ಟಿಎಂಸಿ ಸೇರಿದ್ಯಾಕೆ?

ಸಿಎಂ ಮಮತಾ ಬ್ಯಾನರ್ಜಿ ಅವರ ಕಾರ್ಯವೈಖರಿ ನನಗೆ ಇಷ್ಟವಾಗಿದೆ. ಜನರ ಹಿತದೃಷ್ಟಿಯಿಂದ ಟಿಎಂಸಿ ಸೇರುತ್ತಿದ್ದೇನೆ. ಮಮತಾ ಬ್ಯಾನರ್ಜಿ ಕಾರ್ಯವೈಖರಿ ಮಹಿಳೆಯರಿಗೆ ಸ್ಪೂರ್ತಿಯಾಗಿದೆ. ಸಾರ್ವಜನಿಕರ ಹಿತಕ್ಕಾಗಿ ಕೆಲಸ ಮಾಡಲು ರಾಜಕೀಯ ಪ್ರವೇಶಿಸಿದೆ. ಆದ್ರೆ ಬಿಜೆಪಿಯಲ್ಲಿದ್ದುಕೊಂಡು ನಾನು ನಿರೀಕ್ಷಿಸಿದಷ್ಟು ಕೆಲಸ ಮಾಡಲು ಅವಕಾಶ ಸಿಗಲಿಲ್ಲ. ತಪ್ಪುಗಳನ್ನು ಸರಿಪಡಿಸಿಕೊಳ್ಳಲು ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಪರ್ನೋ ಮಿತ್ರಾ ತಿಳಿಸಿದ್ದಾರೆ.

45
ಬಿಜೆಪಿಯಲ್ಲಿದ್ದುಕೊಂಡು ಕೆಲಸ ಮಾಡಲು ಸಾಧ್ಯವಿಲ್ಲ

ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ಈ ದಿನ ನನಗೆ ತುಂಬಾ ವಿಶೇಷ ಎಂದು ಪರ್ನೋ ಮಿತ್ರಾ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಸಚಿವೆ ಚಂದ್ರಿಮಾ ಭಟ್ಟಾಚಾರ್ಯ, ಬಿಜೆಪಿಯಲ್ಲಿ ಯಾರಿಂದಲೂ ಕೆಲಸ ಮಾಡಲು ಸಾಧ್ಯವಿಲ್ಲ. ಈ ಕಾರಣದಿಂದ ನಟಿ ಪರ್ನೋ ಮಿತ್ರಾ ಟಿಎಂಸಿಗೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ  ಓದಿ: ವಿಧಾನಸಭೆ, ಲೋಕಸಭೆ ಮೀರಿಸಿದ ಪಾಲಿಕೆ ಎಲೆಕ್ಷನ್ , ಗೆದ್ರೆ ಥಾಯ್ಲೆಂಡ್ ಟ್ರಿಪ್, ಕಾರು ಸೇರಿ ಭರ್ಜರಿ ಭರವಸೆ

55
2021ರ ಚುನಾವಣೆಯಲ್ಲಿ ಸೋಲು

ಬಂಗಾಳದಲ್ಲಿ ತಮ್ಮದೇ ಜನಪ್ರಿಯತೆ ಹೊಂದಿರುವ ನಟಿ ಪರ್ನೋ ಮಿತ್ರಾ, 2019ರಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. 2021ರ ಚುನಾವಣೆ ವೇಳೆ ಬಿಜೆಪಿಯಿಂದ ಟಿಕೆಟ್ ಪಡೆದುಕೊಂಡಿದ್ದ ಪರ್ನೋ ಮಿತ್ರಾ ಬಾರಾನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತಪಸ್ ರಾಯ್ ವಿರುದ್ಧ ಪರ್ನೊ ಮಿತ್ರಾ ಸೋತಿದ್ದರು.

ಇದನ್ನೂ ಓದಿ: ಉ.ಪ್ರ. ಸರ್ಕಾರಿ ಶಾಲೆಗಳಲ್ಲಿ ದಿನಪತ್ರಿಕೆ ಓದು ಕಡ್ಡಾಯ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories