ಹಾಸ್ಟೆಲ್‌ ಟಾಯ್ಲೆಟ್‌ನಲ್ಲಿ ಬಿಹಾರ ಮೂಲದ MBBS ವಿದ್ಯಾರ್ಥಿ ಶವವಾಗಿ ಪತ್ತೆ: ತನಿಖೆ ಆರಂಭ

Published : Feb 16, 2026, 02:13 PM IST

ಖಾಸಗಿ ಮೆಡಿಕಲ್ ಕಾಲೇಜೊಂದರ ಹಾಸ್ಟೆಲ್ ಟಾಯ್ಲೆಟ್‌ನಲ್ಲಿ ಬಿಹಾರ ಮೂಲದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಇದು ಆತ್ಮ*ಹತ್ಯೆ ಎಂದು ಶಂಕಿಸಿದ್ದಾರೆ, ಆದರೆ ಮರಣೋತ್ತರ ಪರೀಕ್ಷೆಯ ನಂತರವೇ ನಿಖರ ಕಾರಣ ತಿಳಿಯಲಿದೆ. 

PREV
14
21 ವರ್ಷದ ವಿದ್ಯಾರ್ಥಿ ಸಾವು
ಪಿಟಿಐ ಸುದ್ದಿ ಸಂಸ್ಥೆಯ ಪ್ರಕಾರ, ಪಶ್ಚಿಮ ಬಂಗಾಳದ ದುರ್ಗಾಪುರದಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಟಾಯ್ಲೆಟ್‌ನಲ್ಲಿ 21 ವರ್ಷದ, ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಲಾವಣ್ಯ ಪ್ರತಾಪ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪಾಟ್ನಾ ನಿವಾಸಿಯಾದ ಇವರ ಮೃತದೇಹ ಶನಿವಾರ ರಾತ್ರಿ ಪತ್ತೆಯಾಗಿದ್ದು, ಪೊಲೀಸರು ಶವಾಗಾರಕ್ಕೆ ರವಾನಿಸಿದ್ದಾರೆ.
24
ವೈದ್ಯಕೀಯ ಮತ್ತು ವಿಧಿವಿಜ್ಞಾನ ವರದಿ

ಪಶ್ಚಿಮ ಬಂಗಾಳ ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯು ಇದು ಆತ್ಮಹತ್ಯೆ ಇರಬಹುದು ಎಂದು ಸೂಚಿಸಿದೆ. ಆದರೆ, ಮರಣೋತ್ತರ ಪರೀಕ್ಷೆಯ ನಂತರವೇ ನಿಖರ ಕಾರಣ ತಿಳಿಯಲಿದೆ. ವೈದ್ಯಕೀಯ ಮತ್ತು ವಿಧಿವಿಜ್ಞಾನ ವರದಿಗಳು ಬರುವವರೆಗೂ ಯಾವುದೇ ತೀರ್ಮಾನಕ್ಕೆ ಬರುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ. 

ವಿದ್ಯಾರ್ಥಿಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದ್ದು, ಅವರು ದುರ್ಗಾಪುರಕ್ಕೆ ಬಂದಿದ್ದಾರೆ. ತನಿಖಾಧಿಕಾರಿಗಳು ಘಟನೆಗೂ ಮುನ್ನ ನಡೆದ ವಿದ್ಯಮಾನಗಳನ್ನು ತಿಳಿಯಲು ಸಹಪಾಠಿಗಳು ಮತ್ತು ಹಾಸ್ಟೆಲ್ ನಿವಾಸಿಗಳಿಂದ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

34
ಮಾನಸಿಕ ಒತ್ತಡ
ಇತ್ತೀಚೆಗೆ ನಡೆದ ಸೆಮಿಸ್ಟರ್ ಪರೀಕ್ಷೆಗಳಲ್ಲಿ ವಿದ್ಯಾರ್ಥಿಯು ಒಂದು ವಿಷಯದಲ್ಲಿ ಫೇಲ್ ಆಗಿದ್ದ. ಇದರಿಂದಾಗಿ ಆತ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಎಂಬ ವರದಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಎಲ್ಲಾ ಸಂಭಾವ್ಯ ಆಯಾಮಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗುತ್ತಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
44
ಈ ಹಿಂದೆ ನಡೆದಿತ್ತು ಇಂತಹುವುದೇ ಒಂದು ಘಟನೆ

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಇದೇ ಕಾಲೇಜಿನ ಒಡಿಶಾ ಮೂಲದ ವಿದ್ಯಾರ್ಥಿನಿಯೊಬ್ಬಳು ತನ್ನ ಸ್ನೇಹಿತನೊಂದಿಗೆ ಹೊರಗೆ ಹೋದಾಗ ಆಕೆಯ ಮೇಲೆ ಸಾಮೂಹಿಕ ಅತ್ಯಾ*ಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಆಕೆಯ ಸ್ನೇಹಿತ ಮತ್ತು ಇತರ ಐವರನ್ನು ಬಂಧಿಸಿದ್ದರು. ಈ ಎರಡು ಘಟನೆಗಳು ಪ್ರತ್ಯೇಕವಾಗಿವೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

 (ಆತ್ಮ*ಹತ್ಯೆ ಎಂದಿಗೂ ಪರಿಹಾರವಲ್ಲ. ಮಾನಸಿಕ ಆರೋಗ್ಯ ವೃತ್ತಿಪರರಿಂದ ಸಹಾಯ ಪಡೆಯಿರಿ. ಇಂತಹ ಆಲೋಚನೆಗಳು ಬಂದರೆ, ದಯವಿಟ್ಟು 'ದಿಶಾ' ಸಹಾಯವಾಣಿಗೆ ಕರೆ ಮಾಡಿ. ಟೋಲ್-ಫ್ರೀ ಸಂಖ್ಯೆಗಳು: 1056, 0471-2552056)

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories