ಜಾವಲಿನ್ ಥ್ರೋದಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಸಾಧನೆ ಮಾಡಿದ್ದರು. ಅವರ ಸಾಧನೆಯನ್ನು ಇಡೀ ದೇಶವೇ ಕೊಂಡಾಡಿತ್ತು.
ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನ ತೊಡಿಸಿದ ಜಾವಲಿನ್ ಪಟು ನೀರಜ್ ಚೋಪ್ರಾ ಅವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬಂದಿತ್ತು. ಇಡೀ ದೇಶವೇ ಕ್ರೀಡಾಪಟುವನ್ನು ಮೆಚ್ಚಿಕೊಂಡಿತ್ತು.
ಭಾರತೀಯ ಸೇನೆಯಲ್ಲಿಯೂ ಸೇವೆ ಸಲ್ಲಿಸುತ್ತಿರುವ ಚೋಪ್ರಾ ಜಗಮೆಚ್ಚುವ ಸಾಧನೆ ಮಾಡಿ ಗೆದ್ದ ಪದಕವನ್ನು ದಿಗ್ಗಜ ಮಿಲ್ಖಾ ಸಿಂಗ್ ಅವರಿಗೆ ಅರ್ಪಿಸಿದ್ದರು.
ಜಾವಲಿನ್ ಫೈನಲ್ ಸ್ಪರ್ಧೆಯಲ್ಲಿ ಬರೋಬ್ಬರಿ 87.58 ಮೀಟರ್ ಎಸೆಯುವ ಮೂಲಕ ಪದಕ ಜಯಿಸಿದ್ದರು. ಭಾರತ ಸ್ವಾತಂತ್ರ್ಯಗೊಂಡ ಬಳಿಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅಥ್ಲೀಟಿಕ್ಸ್ ವಿಭಾಗದಲ್ಲಿ ದೇಶಕ್ಕೆ ನೀರಜ್ ಚೋಪ್ರಾ ಮೊದಲ ಪದಕ ಗೆದ್ದು ಕೊಟ್ಟಿದ್ದರು.
ಈ ಪದಕ ಸಾಧನೆಯನ್ನು ನೋಡಲು ನಮ್ಮೊಂದಿಗೆ ಮಿಲ್ಖಾ ಸಿಂಗ್ ಇರಬೇಕಾಗಿತ್ತು ಎಂದು ನೀರಜ್ ಚೋಪ್ರಾ ಸ್ಮರಿಸಿಕೊಂಡಿದ್ದರು . ಭಾರತ ಈ ಬಾರಿ ಟೋಕಿಯೋ ಒಲಿಂಪಿಕ್ಸ್ ನಲ್ಲಿ ಒಂದು ಚಿನ್ನ ಸೇರಿ ಏಳು ಪದಕ ಸಾಧನೆ ಮಾಡಿದೆ.