ನೀಟ್ ಅಕ್ರಮದ ಕುರಿತು ಪ್ರಧಾನಿ ಮೋದಿ ಅವರ ಪ್ರತಿಕ್ರಿಯೆಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಅವರು ಮುಂದಿಟ್ಟಿದ್ದಾರೆ.
ನೀಟ್ ಅಕ್ರಮ ಸಂಬಂಧ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿ ಎಕ್ಸ್ ಖಾತೆ ಮೂಲಕ ಪ್ರತಿಕ್ರಿಯಿಸಿದ್ದಾರೆ. ಈ ಪ್ರತಿಕ್ರಿಯೆಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.
25
ವಿದ್ಯಾರ್ಥಿಗಳ ಬೇಡಿಕೆಗಳು ಸ್ಪಷ್ಟ
ನೀವು ನಮ್ಮ ಯುವಕರ ಭವಿಷ್ಯಕ್ಕೆ ದೊಡ್ಡ ಹಾನಿಯನ್ನುಂಟು ಮಾಡಿದ್ದೀರಿ. ಶಿಕ್ಷಣ ವ್ಯವಸ್ಥೆಯ ಸಂಪೂರ್ಣವಾಗಿ ಬೇರೆಯವರ ಸ್ವಾಧೀನಕ್ಕೆ ನೀಡುವ ಮೂಲಕ ನಾಶ ಮಾಡಿದ್ದೀರಿ ಹಾಗೂ ಅದನ್ನು ಪ್ರೋತ್ಸಾಹಿಸಿದ್ದೀರಿ. ಇದಕ್ಕೆ ಜವಾಬ್ದಾರಿಯಾಗಿರೋ ಪ್ರತಿಯೊಬ್ಬರನ್ನು ರಕ್ಷಣೆ ಮಾಡಿದ್ದೀರಿ. ವಿದ್ಯಾರ್ಥಿಗಳ ಬೇಡಿಕೆಗಳು ಸ್ಪಷ್ಟವಾಗಿವೆ.
1. ಧರ್ಮೇಂದ್ರ ಪ್ರಧಾನ್ ಅವರನ್ನು ಅವರ ಹುದ್ದೆಯಿಂದ ತೆಗೆದುಹಾಕಿ
2. ವಿದ್ಯಾರ್ಥಿಗಳಿಗೆ ಕ್ಷಮೆಯಾಚಿಸಿ.
3. ವಿದ್ಯಾರ್ಥಿಗಳ ವಿರುದ್ಧ ಹಿಂಸಾಚಾರ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಿ
35
ಪ್ರಧಾನಿ ಮೋದಿ ನೀಡಿದ ಭರವಸೆ ಏನು?
ಪೇಪರ್ ಲೀಕ್ ಪ್ರಕರಣಗಳಲ್ಲಿ ಭಾಗಿಯಾಗಿರುವವರಿಗೆ ತಕ್ಷಣವೇ ಮತ್ತು ಕಠಿಣ ಶಿಕ್ಷೆ ವಿಧಿಸಲು ಕೇಂದ್ರ ಸರ್ಕಾರ ಫಾಸ್ಟ್ ಟ್ರ್ಯಾಕ್ (Fast-track courts) ನ್ಯಾಯಾಲಯಗಳನ್ನು ಆರಂಭಿಸಲು ನಿರ್ಧರಿಸಿದೆ. ಈ ನ್ಯಾಯಾಲಯಗಳಲ್ಲಿ ಇಂತಹ ಪ್ರಕರನಗಳ ವಿಚಾರಣೆಯನ್ನು ತ್ವರಿತಗತಿಯಲ್ಲಿ ನಡೆಸಲಾಗುತ್ತದೆ. ಇದರಿಂದ ದೋಷಿಗಳಿಗೆ ಶೀಘ್ರವಾಗಿ ಮತ್ತು ಕಠಿಣ ಶಿಕ್ಷೆ ಸಿಗುತ್ತದೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.
ನೀಟ್ ಅಕ್ರಮ ಸಂಬಂಧ ಪ್ರತಿಭಟನೆ ನಡೆಸುತ್ತಿರುವ ಸಿಜೆಪಿ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಇರಿಸಿದೆ. ಆದ್ರೆ ಈ ಮೂರು ಬೇಡಿಕೆಗಳನ್ನು ಈಡೇರಿಸುವ ಕುರಿತು ಪ್ರಧಾನಿಗಳು ಯಾವುದೇ ಮಾಹಿತಿಯನ್ನು ನೀಡಿಲ್ಲ. ಸಿಜೆಪಿಯ ಮೂರು ಪ್ರಮುಖ ಬೇಡಿಕೆಗಳು ಈ ರೀತಿಯಾಗಿವೆ.
55
ಮೂರು ಬೇಡಿಕೆಗಳು
1.ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
2.ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಬಳಿಕ ಆತ್ಮ*ಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಪರಿವಾರಕ್ಕೆ ತಲಾ 1 ಕೋಟಿ ರು. ಪರಿಹಾರ ನೀಡಬೇಕು.
3.ಸೋನಂ ವಾಂಗ್ಚುಕ್ ಬಿಡುಗಡೆ ಮಾಡಬೇಕು. ಅವರ ಮುಕ್ತ ಓಡಾಟಕ್ಕೆ ಅಡ್ಡಿ ಮಾಡಬಾರದು. ವಿಡಿಯೋ ಸಂದೇಶ ಹಂಚಿಕೊಳ್ಳಲು ಬಿಡಬೇಕು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ