ಅಯೋಧ್ಯೆ ರಾಮ ಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂಪಾಯಿ ಕಾಣೆಯಾಗಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಮತ್ತೊಂದೆಡೆ, ಸ್ವಚ್ಛತೆಯ ಕಾರಣ ನೀಡಿ ಕಾಶಿ ನಗರದೊಳಗಿನ ಎಲ್ಲಾ ಮಾಂಸದಂಗಡಿಗಳನ್ನು ಹೊರಗೆ ಸ್ಥಳಾಂತರಿಸಲು ವಾರಾಣಸಿ ಪಾಲಿಕೆ ನಿರ್ಧರಿಸಿದೆ.
‘ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತಾದಿಗಳ ದೇಣಿಗೆಯಿಂದ ಬಂದ ಕೋಟ್ಯಂತರ ರು.ಗಳು ಕಾಣೆಯಾಗಿವೆ ಎಂಬ ವರದಿಗಳಿವೆ. ದೇವಾಲಯದ ಆಡಳಿತ ಮಂಡಳಿ ಮತ್ತು ಸರ್ಕಾರದ ಮೌನ ಶಂಕಾಸ್ಪದವಾಗಿದೆ’ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಭಾನುವಾರ ಆರೋಪಿಸಿದ್ದಾರೆ.
25
ದೇವಾಲಯದ ಟ್ರಸ್ಟ್‌ಗೆ ಅತ್ಯಂತ ನಾಚಿಕೆಗೇಡಿನ ಪರಿಸ್ಥಿತಿ
ಟ್ವೀಟ್ ಮಾಡಿರುವ ಅವರು, ‘ರಾಮ ಮಂದಿರಕ್ಕೆ ದೇಣಿಗೆಯಿಂದ ಬಂದ ಕೋಟ್ಯಂತರ ರು.ಗಳು ನಾಪತ್ತೆಯಾಗಿವೆ. ಇದು ಪ್ರಪಂಚದಾದ್ಯಂತದ ಶ್ರೀರಾಮನ ಭಕ್ತರಿಗೆ ಬಹಳ ಸೂಕ್ಷ್ಮ ಸುದ್ದಿಯಾಗಿದೆ. ಇದು ದೇವಾಲಯದ ಟ್ರಸ್ಟ್‌ಗೆ ಅತ್ಯಂತ ನಾಚಿಕೆಗೇಡಿನ ಪರಿಸ್ಥಿತಿ. ಯಾರೂ ಮುಂದೆ ಬಂದು ವಿವರಣೆ ನೀಡಲು ಸಿದ್ಧರಿಲ್ಲ. ಟ್ರಸ್ಟ್ ಮತ್ತು ಸರ್ಕಾರದ ಮೌನ ಶಂಕಾಸ್ಪದವಾಗಿದೆ. ಹೀಗಾಗಿ ಕೋರ್ಟ್ ಇದನ್ನು ಸ್ವಯಂಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ. ಯಾದವ್ ಹೇಳಿಕೆಗೆ ಟ್ರಸ್ಟ್ ಅಥವಾ ಉತ್ತರ ಪ್ರದೇಶ ಸರ್ಕಾರದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
35
ಕಾಶಿಯಿಂದ ಎಲ್ಲ ಮಾಂಸದಂಗಡಿ ಎತ್ತಂಗಡಿ
ದೇಶದ ಪ್ರಸಿದ್ಧ ಪುಣ್ಯಕ್ಷೇತ್ರ, ಶ್ರೀ ಕಾಶಿ ವಿಶ್ವನಾಥನ ಧಾಮವಾದ ವಾರಾಣಸಿಯಿಂದ ಎಲ್ಲ ಮಾಂಸದಂಗಡಿಗಳನ್ನು ನಗರದ ಹೊರಗೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಮಾಂಸದಂಗಡಿ ಮಾಲೀಕರ ವಿರೋಧದ ನಡುವೆಯೂ ಈ ನಿರ್ಣಯ ಕೈಗೊಳ್ಳಲಾಗಿದೆ.
‘ನಗರದ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ, ವಾರಾಣಸಿಯ (ಕಾಶಿ) ಒಳಗೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಾಂಸ ಮತ್ತು ಮೀನಿನ ಅಂಗಡಿಗಳನ್ನು ನಗರದ ಆಚೆಗಿನ ನಿರ್ದಿಷ್ಟ ಸ್ಥಳಗಳಿಗೆ ಸ್ಥಳಾಂತರಿಸಲು ವಾರಾಣಸಿ ಮಹಾನಗರ ಪಾಲಿಕೆ ನಿರ್ಧರಿಸಿದೆ’ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
55
350-400 ಮಾಂಸ ಮತ್ತು ಮೀನಿನ ಅಂಗಡಿಗಳು
‘ಶನಿವಾರ ನಡೆದ ಸಭೆಯಲ್ಲಿ ಪಾಲಿಕೆ ಈ ಪ್ರಸ್ತಾವವನ್ನು ಅನುಮೋದಿಸಿದೆ. ಯೋಜನೆಯ ಮೊದಲ ಹಂತದಲ್ಲಿ 5 ಜಾಗಗಳನ್ನು ಗುರುತಿಸಲಾಗಿದೆ. ಪ್ರಸ್ತುತ ನಗರದೊಳಗೆ ಕಾರ್ಯಾಚರಿಸುತ್ತಿರುವ 350-400 ಮಾಂಸ ಮತ್ತು ಮೀನಿನ ಅಂಗಡಿಗಳನ್ನು ಮುಂದಿನ ದಿನಗಳಲ್ಲಿ ರಾಮನಗರ, ಸುಜಾಬಾದ್, ಗಣೇಶಪುರ, ಅವ್ಲೇಶಪುರ ಮತ್ತು ಶಿವಪುರಕ್ಕೆ ಸ್ಥಳಾಂತರಿಸಲಾಗುವುದು. ನಗರದ ಸೂಕ್ತ ನಿರ್ವಹಣೆ ಮತ್ತು ನೈರ್ಮಲ್ಯವನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ಈ ನಿರ್ಧಾರದಿಂದ ತಮ್ಮ ವ್ಯಾಪಾರಕ್ಕೆ ಹೊಡೆತ ಬೀಳುತ್ತದೆ ಎಂದು ಮಾಂಸ ವ್ಯಾಪಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ