ಟ್ರಾಕ್ಟರ್ ರ‍್ಯಾಲಿ ಹಿಂಸಾಚಾರದ ಹಿಂದೆ ಯಾರಿದ್ದಾರೆ? ಮಾಹಿತಿ ಬಹಿರಂಗ ಪಡಿಸಿದ ಕೇಜ್ರಿವಾಲ್!

First Published | Feb 28, 2021, 8:59 PM IST

ರೈತ ಸಂಘಟನೆಗಳು ಆಯೋಜಿಸಿದ ಟ್ರಾಕ್ಟರ್ ರ‍್ಯಾಲಿ ಹಿಂಸಾಚಾರಕ್ಕೆ ತಿರುಗಿದ ಪ್ರಕರಣದ ತನಿಖೆ ನಡೆಯುತ್ತಿದೆ. ಗಣರಾಜ್ಯೋತ್ಸವ ದಿನ ನಡೆದ ಈ ಹಿಂಸಾಚಾರ ವಿಶ್ವದಲ್ಲಿ ಭಾರಿ ಸದ್ದು ಮಾಡಿತ್ತು. ಐತಿಹಾಸಿಕ ಕೆಂಪು ಕೋಟೆಗೆ ಮುತ್ತಿಗೆ ಹಾಕಿ ದಾಂಧಲೆ ನಡೆಸಿ ಕಳಂಕ ತಂದಿದ್ದರು. ಈ ಕೃತ್ಯದ ಹಿಂದೆ ಯಾರಿದ್ದಾರೆ ಅನ್ನೋ ಸತ್ಯವನ್ನು ಪೊಲೀಸರು ಬಯಲಿಗೆಳೆಯುವ ಯತ್ನದಲ್ಲಿದ್ದಾರೆ. ಇದೀಗ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೆಲ ಮಹತ್ವದ ಮಾಹಿತಿ ಬಹಿರಂಗ ಪಡಿಸಿದ್ದಾರೆ.

ಗಣರಾಜ್ಯೋತ್ಸವ ದಿನ ರೈತ ಸಂಘಟನೆಗಳು ಆಯೋಜಿಸಿದ ಟ್ರಾಕ್ಟರ್ ರ‍್ಯಾಲಿ ಹಿಂಸಾಚಾರಕ್ಕೆ ತಿರುಗಿತ್ತು. ಸುಮಾರು 500ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಇನ್ನು ದೇಶ ವಿರೋಧಿ ಚಟುವಟಿಕೆಯೂ ಇದೇ ಟ್ರಾಕ್ಟರ್ ರ‍್ಯಾಲಿಯಲ್ಲಿ ನಡೆದಿತ್ತು
undefined
ದೆಹಲಿಯ ಐತಿಹಾಸಿಕ ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಕೆಂಪು ಕೋಟೆಯ ಪಿಠೋಪಕರಣ ದ್ವಂಸಗೊಳಿಸಿದ್ದರು. ಕೆಂಪು ಕೋಟೆ ಹಿಂಸಾಚಾರದ ಹಿಂದೆ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
undefined
Tap to resize

ಕೆಂಪು ಕೋಟೆಯಲ್ಲಿ ಸಿಖ್ ಧ್ವಜ ಹಾರಿಸಿದ್ದು ಬಿಜೆಪಿ ಕಾರ್ಯಕರ್ತರು. ವ್ಯವಸ್ಥಿತಿ ಷ್ಯಡ್ಯಂತ್ರಕ್ಕೆ ರೈತ ಪ್ರತಿಭಟನೆಯನ್ನು ಬಳಸಿಕೊಳ್ಳಲಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ
undefined
ಪ್ರತಿಭಟನೆ ಮಾಡುತ್ತಿರುವ ರೈತರ ಮೇಲೆ ಮೋದಿ ಸರ್ಕಾರ ಪ್ರಕರಣ ದಾಖಲಿಸುತ್ತಿದೆ. ರೈತರನ್ನು ಜೈಲಿಗೆ ಕಳುಹಿಸುವ ಪ್ರಯತ್ನಕ್ಕೆ ಬಿಜೆಪಿ ಕೈಹಾಕಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
undefined
ಮೀರತ್‌ನಲ್ಲಿ ಆಯೋಜಿಸಲಾದ ಕಿಸಾನ್ ಮಹಾಪಂಚಾಯತ್‌ನಲ್ಲಿ ಪಾಲ್ಗೊಂಡ ಅರವಿಂದ್ ಕೇಜ್ರಿವಾಲ್, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
undefined
ರೈತ ಪ್ರತಿಭಟನೆಗೆ ಆರಂಭದಿಂದಲೂ ಬೆಂಬಲ ವ್ಯಕ್ತಪಡಿಸಿರುವ ಆಮ್ ಆದ್ಮಿ ಪಕ್ಷ ಇದೀಗ ಬೃಹತ್ ಸಮಾವೇಶ ಮೂಲಕ ಪ್ರತಿಭಟನೆಯನ್ನು ಕಾವನ್ನು ಹೆಚ್ಚಿಸಲು ನಿರ್ಧರಿಸಿದೆ.
undefined
ಕಿಸಾನ್ ಮಹಾಸಮ್ಮೇಳನ್ ಆಯೋಜಿಸಲು ಆಪ್ ನಿರ್ಧರಿಸಿದೆ. ಮಾರ್ಚ್ 21 ರಂದು ಆಮ್ ಆದ್ಮಿ ಪಕ್ಷ ಬೃಹತ್ ಸಮಾವೇಶ ಆಯೋಜಿಸಿದೆ.
undefined

Latest Videos

click me!