Delhi Air Quality: ನಿಬಂಧನೆಗಳು ಜಾರಿಯಲ್ಲಿದ್ರೂ ಪಾತಾಳಕ್ಕೆ ಕುಸಿದ ದೆಹಲಿ ವಾಯುಗುಣಮಟ್ಟ

Published : Dec 15, 2025, 09:11 AM IST

Delhi AQI: Delhi Pollution Update: ವಾಯುಗುಣಮಟ್ಟ ಸೂಚ್ಯಂಕವು 459ಕ್ಕೆ ಕುಸಿದಿದೆ. ದಿಲ್ಲಿಯ ವಿವಿಧ ಪ್ರದೇಶಗಳ ಪೈಕಿ ಬವಾನಾ ಎಂಬಲ್ಲಿ 497ಕ್ಕೆ ಕುಸಿತ ಕಂಡಿದೆ.ಬವಾನಾದಲ್ಲಿ ಗಾಳಿ ಗುಣಮಟ್ಟ ಸೂಚ್ಯಂಕವು 497ಕ್ಕೆ ಕುಸಿದು ಅತ್ಯಂತ ಗಂಭೀರ ಹಂತಕ್ಕೆ ತಲುಪಿತ್ತು

PREV
14
ಪಾತಾಳಕ್ಕೆ ಕುಸಿದ ದೆಹಲಿ ವಾಯುಗುಣಮಟ್ಟ

ನವದೆಹಲಿ: ಇಲ್ಲಿನ ವಾಯುಗುಣಮಟ್ಟ (ಎಕ್ಯುಐ) ಭಾನುವಾರ ಮತ್ತಷ್ಟು ಪಾತಾಳಕ್ಕೆ ಕುಸಿದಿದ್ದು, ಭಾನುವಾರ ಸರಾಸರಿ ವಾಯುಗುಣಮಟ್ಟ ಸೂಚ್ಯಂಕವು 459ಕ್ಕೆ ಕುಸಿದಿದೆ. ದಿಲ್ಲಿಯ ವಿವಿಧ ಪ್ರದೇಶಗಳ ಪೈಕಿ ಬವಾನಾ ಎಂಬಲ್ಲಿ 497ಕ್ಕೆ ಕುಸಿತ ಕಂಡಿದೆ.

24
ಗೋಚರತೆ ಬೆಳಗ್ಗೆ 100 ಮೀ.ಗೆ ಕುಸಿತ

ಎಕ್ಯುಐ 400ಕ್ಕಿಂತ ಹೆಚ್ಚು ದಾಖಲಾದರೆ ‘ಅತಿ ಗಂಭೀರ’ ಎಂದು ಪರಿಗಣಿಸಲಾಗುತ್ತದೆ ಹಾಗೂ ಒಬ್ಬ ವ್ಯಕ್ತಿ ದಿನಕ್ಕೆ 23 ಸಿಗರೇಟು ಸೇದುವುದಕ್ಕೆ ಸಮನಾಗಿರುತ್ತದೆ.

ಹೊಗೆ ಮಿಶ್ರಿತ ವಾತಾವರಣದಿಂದ ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯದಲ್ಲಿ ಸರಾಗವಾಗಿ ಉಸಿರಾಡುವುದಕ್ಕೂ ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಲ್ಲದೆ ಗೋಚರತೆ ಬೆಳಗ್ಗೆ 100 ಮೀ.ಗೆ ಕುಸಿದ ಕಾರಣ ದಿಲ್ಲಿ ಸುತ್ತಲಿನ ಹರ್ಯಾಣ ಹಾಗೂ ಉತ್ತರ ಪ್ರದೇಶದ ಕೆಲವೆಡೆ ವಾಹನ ಅಪಘಾತ ಸಂಭವಿಸಿವೆ.

34
ನಿರ್ಬಂಧಗಳು ಜಾರಿಯಲ್ಲಿ

ಈಗಾಗಲೇ ದೆಹಲಿಯಲ್ಲಿ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ (ಜಿಆರ್‌ಎಪಿ) 4ನೇ ಹಂತದ ಅಡಿಯಲ್ಲಿ ಮಾಲಿನ್ಯ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಿದ್ದು, ಶಾಲೆಗಳಿಗೆ ಹೈಬ್ರಿಡ್‌ ಪದ್ಧತಿಯಲ್ಲಿ ತರಗತಿಗಳನ್ನು ನಡೆಸಲು ಸೂಚನೆ ಹೊರಡಿಸಲಾಗಿದೆ. ಅನಗತ್ಯ ಕಟ್ಟಡ ಕಾಮಗಾರಿ, ಗಣಿಗಾರಿಕೆ, ಕಲ್ಲು ಕ್ವಾರಿ, ಡೀಸೆಲ್ ವಾಹನಗಳ ಚಾಲನೆಯನ್ನು ನಗರದಲ್ಲಿ ನಿಷೇಧಿಸಲಾಗಿದೆ.

44
ಬವಾನಾದಲ್ಲಿ ಅತ್ಯಂತ ಕನಿಷ್ಠ

ದೆಹಲಿಯ ಒಳಗಿರುವ ಬವಾನಾದಲ್ಲಿ ಭಾನುವಾರ ಬೆಳಗ್ಗೆ 7 ಗಂಟೆ ಹೊತ್ತಿಗೆ ಗಾಳಿ ಗುಣಮಟ್ಟ ಸೂಚ್ಯಂಕವು 497ಕ್ಕೆ ಕುಸಿದು ಅತ್ಯಂತ ಗಂಭೀರ ಹಂತಕ್ಕೆ ತಲುಪಿತ್ತು. ಅದೇ ರೀತಿ ನರೆಲಾ ಎಂಬಲ್ಲಿ 492, ಒಕ್ಲಾ 2ನೇ ಹಂತದಲ್ಲಿ 474 ದಾಖಲಾಗಿತ್ತು. ಇವೆಲ್ಲವೂ ಅತ್ಯಂತ ಗಂಭೀರ ಹಂತದ್ದಾಗಿದೆ.

Read more Photos on
click me!

Recommended Stories