ಭಾರತಕ್ಕೆ ಎಬೋಲಾ ವೈರಸ್ ಆತಂಕ, ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಆರಂಭ

Published : May 22, 2026, 04:31 PM IST

ಎಬೋಲಾ ವೈರಸ್ ಆತಂಕ ಹೆಚ್ಚಾಗುತ್ತಿದೆ. ಕಾಂಗೋದಲ್ಲಿ ಎಬೋಲಾ ವೈರಸ್ ಸ್ಫೋಟಗೊಂಡಿದೆ. ಪರಿಣಾಮ ಭಾರತದಲ್ಲಿ ನಡಯಬೇಕಿದ್ದ ಇಂಡೋ ಆಫ್ರಿಕನ್ ಶೃಂಗಸಭೆ ಮುಂದೂಡಲಾಗಿದೆ. ಇದೀಗ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಆರಂಭಿಸಿದೆ.

PREV
15
ಎಬೋಲಾ ವೈರಸ್ ಆತಂಕ

ಕೊರೋನಾಗಿಂತ ಮಾರಣಾಂತಿಕ ವೈರಸ್ ಎಬೋಲಾ ಸ್ಫೋಟಗೊಂಡಿದೆ. ಕಾಂಗೋದಲ್ಲಿ ಎಬೋಲಾ ವೈರಸ್‌ನಿಂದ 80ಕೂ ಅದಿಕ ಮಂದಿ ಮೃತಪಟ್ಟಿದ್ದಾರೆ. ಇತ್ತ 280ಕ್ಕೂ ಅಧಿಕ ಮಂದಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ತುರ್ತು ಪರಿಸ್ಥಿತಿ ಘೋಷಿಸಿದೆ. ಇದೀಗ ಎಬೋಲಾ ವೈರಸ್ ಆತಂಕ ಭಾರತಕ್ಕೂ ತಟ್ಟಿದೆ.

25
ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್

ಕಾಂಗೋದಲ್ಲಿ ವೈರಸ್ ಸ್ಪೋಟಗೊಂಡಿರುವ ಪರಿಣಾಮ ಭಾರತದ ಕೆಲ ವಿಮಾನ ನಿಲ್ದಾಣಗಳಲ್ಲಿ ಕಟ್ಟು ನಿಟ್ಟಿನ ಮಾರ್ಗಸೂಚಿ ಪಾಲಿಸಲಾಗುತ್ತಿದೆ. ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ವಿದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಟೆಸ್ಟ್ ಮಾಡಲಾಗುತ್ತಿದೆ.

35
ವಿಮಾನ ನಿಲ್ದಾಣಗಳಲ್ಲಿ ಎಚ್ಚರಿಕೆ

ದೆಹಲಿ ಸೇರಿದಂತೆ ಕೆಲ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಆಫ್ರಿಕಾ ದೇಶ ಹಾಗೂ ಸಂಪರ್ಕದಲ್ಲಿರುವ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗುತ್ತಿದೆ. ಈ ಮೂಲಕ ಭಾರತ ಈಗಗಾಲೇ ಎಬೋಲಾ ವೈರಸ್ ಕುರಿತು ತೀವ್ರ ಕಟ್ಟೆಚ್ಚರ ವಹಿಸಿದೆ.

45
ದೆಹೆಲಿ ಶೃಂಗಸಭೆ ಮುಂದೂಡಿಕೆ

ಮೇ.28 ರಂದು ಆಫ್ರಿಕಾ ಯೂನಿಯನ್ ಹಾಗೂ ಭಾರತ ನಡುವಿನ ಮಹತ್ವದ ಶೃಂಗಸಭೆ ದೆಹಲಿಯಲ್ಲಿ ನಡಯಬೇಕಿತ್ತು. ಆದರೆ ಆಫ್ರಿಕನ್ ದೇಶಗಳಲ್ಲಿ ಎಬೋಲಾ ಸ್ಫೋಟಗೊಂಡ ಪರಿಣಾಮ ಈ ಶೃಂಗಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಎಬೋಲಾ ಪರಿಸ್ಥಿತಿ ನೋಡಿಕೊಂಡು ಮುಂದಿನ ದಿನಾಂಕ ನಿಗದಿಪಡಿಸಲು ಸೂಚಿಸಲಾಗುತ್ತೆ ಎಂದಿದೆ.

55
ಆರೋಗ್ಯ ಇಲಾಖೆಯಿಂದ ತೀವ್ರ ಕಟ್ಟೆಚ್ಚರ

ಆಫ್ರಿಕಾ ದೇಶದಲ್ಲಿ ಎಬೋಲಾ ವೈರಸ್ ಹರಡುತ್ತಿದ್ದಂತೆ ಕೇಂದ್ರ ಆರೋಗ್ಯ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ. ಈಗಾಗಲೇ ಮಹತ್ವದ ಸಭೆ ನಡೆಸಿ ಮುಂಜಾಗ್ರತ ಕ್ರಮಗಳ ಕುರಿತು ಚರ್ಚಿಸಿದೆ. ಸದ್ಯ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣ ಪತ್ತೆಯಾಗಿಲ್ಲ. ಆದರೆ ಕೊರೋನಾಗಿಂತ ಮಾರಕ ವೈರಸ್ ಆಗಿರುವ ಕಾರಣ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories