ಭಾರತದಲ್ಲಿ ಮುಂಗಾರು ಪ್ರವೇಶಿಸಿದರೂ ಎಲ್ ನಿನೋ ಪರಿಣಾಮದಿಂದಾಗಿ ವಾಡಿಕೆಗಿಂತ ಶೇ.28ರಷ್ಟು ಮಳೆ ಕೊರತೆಯಾಗಿದೆ. ಕರ್ನಾಟಕದ ಕಾವೇರಿ ಕಣಿವೆ ಹಾಗೂ ಕರಾವಳಿ ಭಾಗಗಳಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದ್ದು, ರಾಜ್ಯದ ಜಲಾಶಯಗಳಲ್ಲಿ ಕೇವಲ ಶೇ.23ರಷ್ಟು ನೀರು ಮಾತ್ರ ಸಂಗ್ರಹವಾಗಿದೆ.
ಭಾರತಕ್ಕೆ ಮುಂಗಾರು ಪ್ರವೇಶಿಸಿ 2 ವಾರ ಕಳೆಯುತ್ತಾ ಬಂದರೂ ಮಳೆ ಪ್ರಮಾಣ ಕುಸಿತಗೊಂಡಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ವಾಡಿಕೆಗಿಂತ ಶೇ.28ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜೂ.4ರಿಂದ ಜೂ.14ರ ಅವಧಿಯಲ್ಲಿ ದೇಶದಲ್ಲಿ 34.3 ಮಿ.ಮೀ ಮಳೆಯಾಗಿದೆ. ಆದರೆ ಈ ಅವಧಿಯಲ್ಲಿ ವಾಡಿಕೆ ಪ್ರಕಾರ 47.7 ಮೀ.ಮೀ ಮಳೆಯಾಗಬೇಕಿತ್ತು. ಅರ್ಥಾತ್ ಶೇ.28ರಷ್ಟು ಕೊರತೆ ಉಂಟಾಗಿದೆ ಎಂದು ಅದು ತಿಳಿಸಿದೆ.
24
ಎಲ್ ನಿನೋ ಪರಿಣಾಮ
ಜಿಲ್ಲಾವಾರು ಮಳೆಯ ಪ್ರಮಾಣ ಗಮನಿಸಿದರೆ ಭಾರತದ ಕೇಂದ್ರ, ಪೂರ್ವ ಭಾಗಗಳಲ್ಲಿ ಕೊರತೆಯಾಗಿದೆ. ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗಿರುವ ಮಾಹಿತಿಯಿದ್ದರೂ ಒಟ್ಟಾರೆ ಪ್ರಮಾಣದಲ್ಲಿ ಕೊರತೆಯುಂಟಾಗಿದೆ ಎಂದು ಇಲಾಖೆ ಹೇಳಿದೆ. ತಿಂಗಳ ಮೊದಲ ವಾರದಲ್ಲಿಯೇ ಕೇರಳ ಮುಖೇನ ಮುಂಗಾರು ಪ್ರವೇಶಿಸಿದ್ದರೂ ಎಲ್ ನಿನೋ ಪರಿಣಾಮ ಈ ಬಾರಿ ಮುಂಗಾರು ಕುಂಠಿತವಾಗಬಹುದು ಎಂದು ಹವಾಮಾನ ಇಲಾಖೆ ಈ ಮೊದಲೇ ಎಚ್ಚರಿಕೆ ನೀಡಿತ್ತು.
34
ವಾಡಿಕೆಗಿಂತ ಶೇ.36ರಷ್ಟು ಕಡಿಮೆ ಮಳೆ
ದಕ್ಷಿಣ ಒಳನಾಡಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ.36ರಷ್ಟು ಕಡಿಮೆ ಮಳೆಯಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು ಮಳೆ ಸುರಿಯುವ ಕರಾವಳಿಯಲ್ಲೂ ಶೇ.41ರಷ್ಟು ಕಡಿಮೆ ಮಳೆಯಾಗಿದೆ. ಇನ್ನು ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಕ್ರಮವಾಗಿ ಶೇ.2 ಮತ್ತು ಶೇ.1ರಷ್ಟು ಕಡಿಮೆ ಮಳೆಯಾಗಿದೆ.
ಪೂರ್ವ ಮುಂಗಾರು ಹಾಗೂ ದುರ್ಬಲ ಮುಂಗಾರು ಪರಿಣಾಮ ಜಲಾಶಯಗಳ ಮೇಲೆ ಉಂಟಾಗಿದ್ದು, ಡ್ಯಾಂಗಳಲ್ಲಿ ಜೂ.15ರವರೆಗೆ ಒಟ್ಟು ಸಾಮರ್ಥ್ಯದ ಶೇ.23ರಷ್ಟು ಮಾತ್ರ ನೀರಿದೆ. ಜೂ.15ರಂದು ರಾಜ್ಯದ ಎಲ್ಲಾ ಜಲಾಶಯಗಳಲ್ಲಿ 206.45 ಟಿಎಂಸಿ ನೀರು ಸಂಗ್ರಹವಾಗಿದೆ. ಆದರೆ, ಕಳೆದ ವರ್ಷ ಜೂ.15ರಂದು 349 ಟಿಎಂಸಿ ನೀರು ಸಂಗ್ರಹವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ