Plane crash photos : ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ವಿಮಾನ ಪತನ, ಸುಟ್ಟು ಕರಕಲಾದ ಡಿಸಿಎಂ

Published : Jan 28, 2026, 10:04 AM IST

Maharashtra Deputy CM's Aircraft Crashes in Baramati ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಇಂದು ಬುಧವಾರ ಬೆಳಿಗ್ಗೆ ಬಾರಾಮತಿಯಲ್ಲಿ ಲ್ಯಾಂಡ್‌ ಆಗುವ  ಪ್ರಯತ್ನದಲ್ಲಿ ಪತನಗೊಂಡಿದೆ. ಅದಕ್ಕೆ ಸಂಬಂಧಿಸಿದ ಚಿತ್ರಗಳು ಇವೆ.

PREV
14
ಅಜಿತ್ ಪವಾರ್ ವಿಮಾನ ಪತನ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಗಂಭೀರ ಅಪಘಾತಕ್ಕೀಡಾಗಿದೆ. ಈ ಗಂಭೀರ ಅಪಘಾತದಲ್ಲಿ ಅಜಿತ್ ಪವಾರ್ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿತ್ತಿದ್ದಾರೆ.

24
ಅಜಿತ್ ಪವಾರ್ ವಿಮಾನ ಪತನ

ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ. ಅಜಿತ್​ ಪವಾರ್​ ಸೇರಿದಂತೆ ಎಲ್ಲಾ ಐದು ಮಂದಿ ಪ್ರಯಾಣಿಕರು ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

34
ಅಜಿತ್ ಪವಾರ್ ವಿಮಾನ ಪತನ

ಅಜಿತ್ ಪವಾರ್ ಅವರು ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವಿಮಾನವು ತಾಂತ್ರಿಕ ದೋಷದಿಂದ ಅಥವಾ ಇಳಿಯುವಾಗ ಉಂಟಾದ ಅಡಚಣೆಯಿಂದ ಪತನಗೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಇಂದು ಬೆಳಗ್ಗ 8.30ಕ್ಕೆ ಸಂಭವಿದೆ.

44
ಅಜಿತ್ ಪವಾರ್ ವಿಮಾನ ಪತನ

ಈ ಘಟನೆ ರಾಜಕೀಯ ವಲಯದಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ. ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು. ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Photos on
click me!

Recommended Stories