ಸತತ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹೈದರಾಬಾದ್ ಜನಜೀವನ ಅಸ್ತವ್ಯಸ್ತವಾಗಿದ್ದು 52 ಜನ ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. ಹೈದರಾಬಾದ್ ನಲ್ಲಿಯೇ 25 ಮಂದಿ ಮೃತಪಟ್ಟಿದ್ದರೆ, ಮಹಬೂಬ್ ನಗರ ಜಿಲ್ಲೆಯಲ್ಲಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ.
undefined
ಸೇನಾಪಡೆ ಮತ್ತು ಎನ್ ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದು ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿದೆ.
undefined
ಯೋಧರು ತಮ್ಮ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿರುವುದನ್ನು ಈ ಪೋಟೋಗಳೆ ಹೇಳುತ್ತವೆ.
undefined
ಧಾರಾಕಾರ ಮಳೆ ಜನಜೀವನದ ಮೇಲೆ ಪರಿಣಾಮ ಬೀರಿದ್ದು ಕೊರೋನಾದೊಂದಿಗೆ ಜಲ ಪ್ರಳಯದ ವಿರುದ್ಧವೂ ಜನ ಅನಿವಾರ್ಯವಾಗಿ ಹೋರಾಟ ಮಾಡಬೇಕಾಗಿದೆ.
undefined
ತೆಲಂಗಾಣ ಸರ್ಕಾರ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಯಾರೂ ದುಸ್ಸಾಹಸಕ್ಕೆ ಕೈ ಹಾಕಬೇಡಿ ಎಂದು ಸರ್ಕಾರಗಳು ಮನವಿ ಮಾಡಿಕೊಂಡಿವೆ .
undefined
ಸೇನೆಯಿಂದ ಮುಂದುವರಿದ ರಕ್ಷಣಾ ಕಾರ್ಯ
undefined