ಭಾರತದ ಶ್ರೀಮಂತ ವ್ಯಕ್ತಿ, ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ. ಪವಿತ್ರ ಗಂಗಾ, ಯಮುನಾ, ಸರಸ್ವತಿ ನದಿಗಳು ಸೇರುವ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ ನಂತರ, ಅವರು ತಮ್ಮ ಕುಟುಂಬದೊಂದಿಗೆ ಬಡೇ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದರು. ಹನುಮಂತನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.